ದಾವಣಗೆರೆ: ಪೌರತ್ವ ಕಾಯ್ದೆ ತಿದ್ದುಪಡಿ ಕುರಿತಂತೆ ಜನ ಜಾಗೃತಿ ಮೂಡಿಸಲು ಬಂದಿದ್ದ ಬಿಜೆಪಿ ನಾಯಕರನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜನರು ತರಾಟೆಗೆ ತಗೆದುಕೊಂಡ ಘಟನೆ ನಗರದ ಎಸ್.ಒ.ಜಿ ಕಾಲೋನಿಯಲ್ಲಿ ನಡೆದಿದೆ.
ಬಿಜೆಪಿಯ ಮಾಜಿ ಮುಖ್ಯ ಸಚೇತಕ ಶಿವಯೋಗಿ ಸ್ವಾಮಿ ಸೇರಿದಂತೆ ಕೆಲ ನಾಯಕರ ಜೊತೆ ಜನರು ಮಾತಿನ ಚಕಮಕಿ ನಡೆಸಿದರು. ಪ್ರತಿ ವಾರ್ಡ್ಗಳಿಗೆ ಹೋಗಿ ಪೌರತ್ವ ಕಾಯ್ದೆ ತಿದ್ದುಪಡಿ ಬಗ್ಗೆ ಜಾಗೃತಿ ಮೂಡಿಸಲು ಬಿಜೆಪಿ ಕಾರ್ಯಕರ್ತರು ಮುಂದಾದರು. ನಾವೆಲ್ಲ ಈ ಕಾಲೋನಿಯಲ್ಲಿ ಒಗ್ಗಟ್ಟಾಗಿ ಇದ್ದೇವೆ. ಜನರನ್ನ ದಿಕ್ಕು ತಪ್ಪಿಸುವ ಕೆಲಸ ಮಾಡಬೇಡಿ ಎಂದು ತರಾಟೆಗೆ ತಗೆದುಕೊಂಡರು.
ಅಷ್ಟೇ ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧಿಕ್ಕಾರ ಕೂಗಿದರು. ನಂತರ ಬಿಜೆಪಿ ಕಾರ್ಯಕರ್ತರು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಹಿಂತಿರುಗಿದರು.