ದಾವಣಗೆರೆ: ಜಿಲ್ಲೆಯ ಜಗಳೂರಿನಲ್ಲಿ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾದ ಹಿನ್ನೆಲೆ ಪಕ್ಕದ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ತಮ್ಮ ಗ್ರಾಮವನ್ನು ಲಾಕ್ಡೌನ್ ಮಾಡಿದ್ದಾರೆ.
ಜಗಳೂರು ತಾಲೂಕಿನಿಂದ 9 ಕಿಲೋ ಮೀಟರ್ ದೂರದ ಸಿದ್ದಮ್ಮಹಳ್ಳಿ ಗ್ರಾಮಸ್ಥರು ಸ್ವಯಂಪ್ರೇರಿತ ಲಾಕ್ಡೌನ್ ಮಾಡಿದ್ದು, ಗ್ರಾಮದೊಳಗೆ ಯಾರೂ ಪ್ರವೇಶ ಮಾಡುವಂತಿಲ್ಲ. ಗ್ರಾಮದಿಂದ ಯಾರೂ ಹೊರಗೆ ಹೋಗುವಂತಿಲ್ಲ. ಬೆಂಗಳೂರು ಸೇರಿದಂತೆ ಬೇರೆ ಕಡೆಯಿಂದ ಬಂದವರು ಮಾಹಿತಿಯನ್ನು ಕಡ್ಡಾಯವಾಗಿ ನೀಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಪ್ರತಿಯೊಬ್ಬರು ಆಶಾ ಕಾರ್ಯಕರ್ತೆಯರು ಇಲ್ಲವೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ ಸ್ವ್ಯಾಬ್ ಪರೀಕ್ಷೆ ಮಾಡಿಸಿಕೊಳ್ಳಬೇಕು.16 ದಿನ ಕ್ವಾರಂಟೈನ್ನಲ್ಲೇ ಉಳಿಯಬೇಕು. ಗ್ರಾಮದ ಪ್ರತಿಯೊಬ್ಬರೂ ಕೊರೊನಾ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಡಂಗೂರ ಹೊಡೆಯುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಸ್ವಯಂಪ್ರೇರಿತ ಲಾಕ್ಡೌನ್ಗೆ ಗ್ರಾಮ ಪಂಚಾಯತ್ನ ಎಲ್ಲಾ ಸದಸ್ಯರು ಸಾಥ್ ನೀಡಿದ್ದಾರೆ.