ETV Bharat / state

ಗ್ರೀನ್​​ ಝೋನ್​ ಆಗಿದ್ದ ದಾವಣಗೆರೆಗೆ ಮುಳುವಾದ ಆ ಒಂದು ಪ್ರಕರಣ... ಲಾಕ್​ಡೌನ್​ ಸಡಿಲಿಕೆ ಆದೇಶ ರದ್ದು

ಮಂಗಳವಾರದಂದು ಜಿಲ್ಲೆ ಗ್ರೀನ್ ಝೋನ್‍ಗೆ ಪ್ರವೇಶ ಪಡೆದಿತ್ತು.‌ ಆದ್ರೆ ಬಾಷಾ ನಗರದಲ್ಲಿ ಮಹಿಳೆಗೆ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಲಾಕ್‍ಡೌನ್ ಸಡಿಲಿಕೆಯನ್ನು ಈ ಕ್ಷಣದಿಂದ ಜಾರಿಗೆ ಬರುವಂತೆ ಪಾಲಿಕೆ ವ್ಯಾಪ್ತಿಯ 45 ವಾರ್ಡುಗಳಲ್ಲಿ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Permitted Activity Order Revoked Davanagere District administration
ಅನುಮತಿಸಲಾದ ಚಟುವಟಿಕೆ ಆದೇಶ ಹಿಂಪಡೆದ ದಾವಣಗೆರೆ ಜಿಲ್ಲಾಡಳಿತ
author img

By

Published : Apr 30, 2020, 10:07 AM IST

ದಾವಣಗೆರೆ: ಕೊರೊನಾ‌ ಪ್ರಕರಣ ದೃಢಪಟ್ಟ ಕಾರಣ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಗೂ ಅಧಿಸೂಚಿತ ನಿಯಂತ್ರಣ ವಲಯದ ಬಫರ್ ಝೋನ್ ವ್ಯಾಪ್ತಿಗೆ ಅನ್ವಯಿಸುವಂತೆ ಮಾತ್ರ ಅನುಮತಿ ನೀಡಲಾಗಿದ್ದ ಚಟುವಟಿಕೆಗಳ ಆದೇಶವನ್ನು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಹಿಂಪಡೆದಿದ್ದಾರೆ.

ಮಂಗಳವಾರದಂದು ಜಿಲ್ಲೆ ಗ್ರೀನ್ ಝೋನ್‍ಗೆ ಪ್ರವೇಶ ಪಡೆದಿತ್ತು.‌ ಆದ್ರೆ ಬಾಷಾ ನಗರದಲ್ಲಿ ಮಹಿಳೆಗೆ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಲಾಕ್‍ಡೌನ್ ಸಡಿಲಿಕೆಯನ್ನು ಈ ಕ್ಷಣದಿಂದ ಜಾರಿಗೆ ಬರುವಂತೆ ಪಾಲಿಕೆ ವ್ಯಾಪ್ತಿಯ 45 ವಾರ್ಡ್​ಗಳಲ್ಲಿ ಹಿಂಪಡೆಯಲಾಗಿದೆ ಎಂದು ತಿಳಿಸಿದರು.

ನಗರದ ಘೋಷಿತ ಸ್ಲಂಗಳಲ್ಲಿ ಒಂದಾದ ಬಾಷಾನಗರದ ಮಹಿಳೆಯೊಬ್ಬರಲ್ಲಿ ಕೊರೊನಾ ವೈರಸ್ ಪಾಸಿಟಿವ್ ಬಂದಿದ್ದು ಇವರು ರೋಗಿ ಸಂಖ್ಯೆ 533 ಆಗಿದ್ದಾರೆ. ಈ ಮಹಿಳೆ ಈ ಭಾಗದ ನಗರ ಆರೋಗ್ಯ ಕೇಂದ್ರದಲ್ಲಿ ನರ್ಸ್​​ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರನ್ನು ಈಗಾಗಲೇ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಆರಂಭಿಸಲಾಗಿದೆ.

Permitted Activity Order Revoked Davanagere District administration
ಅನುಮತಿಸಲಾದ ಚಟುವಟಿಕೆ ಆದೇಶ ಹಿಂಪಡೆದ ದಾವಣಗೆರೆ ಜಿಲ್ಲಾಡಳಿತ

ಈ ಮಹಿಳೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ 20 ಜನರನ್ನು ಹೋಟೆಲ್ ಒಂದರಲ್ಲಿ ಐಸೋಲೇಷನ್‍ನಲ್ಲಿ ಇಡಲಾಗಿದೆ. ಇವರ ಸಂಪರ್ಕದಲ್ಲಿದ್ದ 35 ಜನರ ಗಂಟಲು ದ್ರವ ಮಾದರಿಯನ್ನು ಇಂದು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಇವರು ಕೆಲಸ ಮಾಡುತ್ತಿದ್ದ ನಗರ ಆರೋಗ್ಯ ಕೇಂದ್ರವನ್ನು ಬಂದ್ ಮಾಡಲಾಗಿದೆ. ಕಂಟೈನ್‍ಮೆಂಟ್ ಮತ್ತು ಬಫರ್ ಝೋನ್ ಗುರುತಿಸುವಿಕೆ ಸೋಂಕಿತ ಮಹಿಳೆ ವಾಸಿಸುತ್ತಿದ್ದ ಮನೆಯನ್ನು ಎಪಿ ಸೆಂಟರ್ ಎಂದು ಗುರುತಿಸಿ ಈ ಎಪಿಸೆಂಟರ್​ನ 100 ಮೀಟರ್ ವ್ಯಾಪ್ತಿ ಪ್ರದೇಶವನ್ನು ಕಂಟೈನ್‍ಮೆಂಟ್ ಝೋನ್ ಎಂದು ಗುರುತಿಸಲಾಗಿದೆ.

ಈ ಪ್ರದೇಶವನ್ನು ಅಗತ್ಯ ವಸ್ತುಗಳು ಮತ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಸಂಪೂರ್ಣ ಸೀಲ್‍ಡೌನ್ ಮಾಡಲಾಗುವುದು. ಜೊತೆಗೆ ಇಲ್ಲಿ ಸಕ್ರಿಯ ಸರ್ವೇಲೆನ್ಸ್ ನಡೆಸಲಾಗುವುದು. ಎಪಿಸೆಂಟರ್​​ನಿಂದ 5 ಕಿ.ಮೀ ವ್ಯಾಪ್ತಿ ಪ್ರದೇಶವನ್ನು ಬಫರ್ ಝೋನ್ ಎಂದು ಗುರುತಿಸಿದ್ದು, ಇಲ್ಲಿಯೂ ಸಹ ಸರ್ವೆಲೆನ್ಸ್ ನಡೆಯಲಿದೆ.

ಪ್ರಸ್ತುತ ಕ್ವಾರೆಂಟೈನ್ ಮಾಡಲು ನಗರದಲ್ಲಿ ಹೋಟೆಲ್‍ಗಳಲ್ಲಿ 740 ರೂಂಗಳನ್ನು ಕಾಯ್ದಿರಿಸಲಾಗಿದೆ. ಈ ಮಹಿಳೆಯ ಸೆಕೆಂಡರಿ ಕಾಂಟಾಕ್ಟ್ ಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಲಾಗುವುದು. ಈ ಮಹಿಳೆ ಏ.23 ರಂದು ಮಹಿಳೆಯೋರ್ವರಿಗೆ ಹೆರಿಗೆ ಮಾಡಿಸಿದ್ದು, ನಂತರ ತಮಗೆ ಸುಸ್ತು ಮತ್ತು ಸ್ವಲ್ಪ ಜ್ವರ ಕಾಣಿಸಿಕೊಂಡಿದೆ ಎಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಾಗ ತಿಳಿಸಿದ್ದಾರೆ. ಆದ ಕಾರಣ ಆ ಮಹಿಳೆಯನ್ನೂ ಪತ್ತೆ ಹಚ್ಚಿ ಅವರನ್ನೂ ಪರೀಕ್ಷೆಗೆ ಒಳಪಡಿಸಿ ಕ್ರಮ ಕೈಗೊಳ್ಳಲಾಗುವುದು. ಸೋಂಕಿತ ಮಹಿಳೆಯ ಅಕ್ಕನ ಮನೆ ನಿಟುವಳ್ಳಿಯಲ್ಲಿ ಇದ್ದು ಸೋಂಕಿತಳ ಮಗ ಅಲ್ಲಿಗೆ ಹೋಗಿ ಬಂದಿದ್ದಾನೆ ಎನ್ನಲಾಗಿದ್ದು ಅಲ್ಲಿರುವ ಅವರ ಸಂಬಂಧಿಕರನ್ನೂ ಪರೀಕ್ಷಿಸಿ ಕ್ರಮ ವಹಿಸಲಾಗಿದೆ.

ಇನ್ಸಿಡೆಂಟ್ ಕಮಾಂಡರ್ ನೇಮಕ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್‍ರನ್ನು ಈ ಕಂಟೈನ್‍ಮೆಂಟ್ ಝೋನ್ ನಿರ್ವಹಣೆಗಾಗಿ ಇನ್ಸಿಡೆಂಟ್ ಕಮಾಂಡರ್ ಎಂದು ನೇಮಕ ಮಾಡಲಾಗಿದೆ. ಕಂಟೈನ್‍ಮೆಂಟ್ ಝೋನ್‍ನಲ್ಲಿನ ಪ್ರತಿ ಮನೆ ಸರ್ವೇ ಮಾಡಲಾಗುವುದು. ಏರಿಯಾ ಡಿಸ್‍ಇನ್‍ಫೆಕ್ಷನ್ ಕೆಲಸ ಮಾಡಲಾಗುವುದು. ಹಾಗೆಯೇ ಈ ಪ್ರದೇಶಗಳಿಗೆ ಅಗತ್ಯ ವಸ್ತುಗಳು, ವೈದ್ಯಕೀಯ ಸೇವೆ ಹೊರತುಪಡಿಸಿ ಯಾವುದೇ ಖಾಸಗಿ ವಾಹನಗಳ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.

ಪಾಲಿಕೆ ವ್ಯಾಪ್ತಿಯ 45 ವಾರ್ಡುಗಳು ಸೇರಿದಂತೆ ಕಲ್ಪನಹಳ್ಳಿ, ಪುಟಗನಾಳ್, ಬೇತೂರು, ಬೂದಾಳ್, ದೇವಿಕೆರೆ ಹೀಗೆ ನಗರ ವ್ಯಾಪ್ತಿಗೊಳಪಡುವ ಕೆಲವು ಗ್ರಾಮಗಳಿಗೂ ನಿನ್ನೆ ಘೋಷಿಸಿದ್ದ ಸಡಿಲಿಕೆಯನ್ನು ನಿರ್ಬಂಧಿಸಿ ಅಗತ್ಯ ವಸ್ತುಗಳ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಈ ಸೋಂಕಿತ ಮಹಿಳೆಯಿಂದ ಕಳೆದ 15 ದಿನಗಳಿಂದ ಚಿಕಿತ್ಸೆ, ಶುಶ್ರೂಷೆ ಪಡೆದವರು ಅಥವಾ ಸಂಪರ್ಕಕ್ಕೆ ಬಂದವರು ಜಿಲ್ಲಾಸ್ಪತ್ರೆಗೆ ಬಂದು ಪರೀಕ್ಷೆಗೆ ಒಳಗಾಗುವಂತೆ ಈ ಮೂಲಕ ಮನವಿ ಮಾಡುತ್ತೇನೆ ಎಂದರು.

ಕೃಷಿ ಚಟುವಟಿಕೆಗಾಗಿ ವಿವಿಧ ತಾಲ್ಲೂಕು ಮತ್ತು ಹಳ್ಳಿಗಳಿಂದ ದಾವಣಗೆರೆಗೆ ರೈತರು ಬರುವುದನ್ನು ನಿಲ್ಲಿಸಿದರೆ ಒಳಿತು. ಇಲ್ಲಿ ಸೋಂಕಿರುವುದರಿಂದ ಆದಷ್ಟು ತಾಲ್ಲೂಕು ಕೇಂದ್ರಗಳಲ್ಲೇ ಗೊಬ್ಬರ, ಬೀಜ, ಪರಿಕರ ಕೊಳ್ಳಬೇಕು. ಕೃಷಿಕರಿಗೆ ಸಹಕಾರಿಯಾಗುವಂತೆ ದಾವಣಗೆರೆಯಲ್ಲಿ ಅಗ್ರಿ ವಾರ್ ರೂಂ ಮಾಡುವ ಚಿಂತನೆ ಮಾಡಲಾಗುತ್ತಿದ್ದು, ಇದರ ಮೂಲಕ ಕೃಷಿಕರ ಮನೆ ಬಾಗಿಲಿಗೆ ಕೃಷಿ ಚಟುವಟಿಕೆಗೆ ಸಂಬಂಧಿಸಿದ ವಸ್ತುಗಳನ್ನು ತಲುಪಿಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.