ಹರಿಹರ: ದೇಶದಲ್ಲಿ ರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತಾ, ರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬರುತ್ತಾರೆ. ಆದರೆ ರಾಮಾಯಣ ಬರೆದ ವಾಲ್ಮೀಕಿ ಬಗ್ಗೆಯೂ ಗೌರವ ಇರಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪರೋಕ್ಷವಾಗಿ ಶ್ರೀ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ವಾಗ್ದಾಳಿ ನಡೆಸಿದರು.
ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಸಮಾಜದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಸ್ವಾಮೀಜಿ, ರಾಮನ ಹೆಸರಿನಲ್ಲಿ ರಾಜಕಾರಣ ಮಾಡುವರು ಅಯೋಧ್ಯೆಯ ರಾಮ ಮಂದಿರದ ಸ್ಥಳದಲ್ಲಿ ವಾಲ್ಮೀಕಿ ದೇವಸ್ಥಾನ ನಿರ್ಮಿಸಬೇಕು. ಮೀಸಲಾತಿ ವಿಚಾರ ಸ್ಪಷ್ಟಪಡಿಸಬೇಕು. ವಾಲ್ಮೀಕಿ ಸಮಾಜಕ್ಕೆ ಶೇ. 7.5 ಮೀಸಲಾತಿ ಹೆಚ್ಚಿಸಬೇಕು. ಈಗಾಗಲೇ ನ್ಯಾ. ನಾಗಮೋಹನ್ ದಾಸ್ ಅವರು ವರದಿ ನೀಡಿದ್ದಾರೆ. ರಾಜ್ಯ ಸರ್ಕಾರ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಇಷ್ಟರಲ್ಲಿಯೇ ಸಚಿವ ಶ್ರೀರಾಮುಲು ಹಾಗೂ ರಮೇಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಲಾಗುವುದು ಎಂದು ಸ್ವಾಮೀಜಿ ತಿಳಿಸಿದರು.