ETV Bharat / state

ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆ: ಕಾರ್ಯಕ್ರಮಕ್ಕೆ ಹಾಜರಾಗಲು ಜಿಲ್ಲಾಧಿಕಾರಿ ಖಡಕ್​ ವಾರ್ನಿಂಗ್​ - ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ನಿಯೋಜನೆ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ-2019

ರಾಷ್ಟ್ರ ಹಬ್ಬವಾದ ಗಣರಾಜ್ಯೋತ್ಸವ ಆಚರಣೆ ಅರ್ಥಪೂರ್ಣವಾಗಿರಲಿ. ಎಲ್ಲಾ ಇಲಾಖೆಯ ಮುಖ್ಯಸ್ಥರು ತಮ್ಮ ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರೆವೇರಿಸಿ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಹಾಜರಾಗದೇ ಇರುವವರಿಗೆ ನೋಟಿಸ್ ನೀಡಲಾಗುವುದು ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಖಡಕ್​ ವಾರ್ನಿಂಗ್​ ನೀಡಿದ್ದಾರೆ.

Davangere
ಗಣರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆ
author img

By

Published : Jan 10, 2020, 8:26 PM IST

ದಾವಣಗೆರೆ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 71 ನೇ ಗಣರಾಜ್ಯೋತ್ಸವ ಪೂರ್ವಸಿದ್ದತೆ ಸಭೆಯು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ರಾಷ್ಟ್ರ ಹಬ್ಬವಾದ ಗಣರಾಜ್ಯೋತ್ಸವ ಆಚರಣೆ ಅರ್ಥಪೂರ್ಣವಾಗಿರಲಿ. ದೇಶದ ಗಣರಾಜ್ಯಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರನ್ನು ನೆನೆಯುವ ದಿನ ಇದಾಗಿದ್ದು, ಅವರ ಶ್ರಮ ತ್ಯಾಗ, ಬಲಿದಾನಗಳಿಗೆ ನಾವು ಗೌರವ ಸಮರ್ಪಿಸೋಣ. ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಲಿದೆ. ಎಲ್ಲಾ ಇಲಾಖೆಯ ಮುಖ್ಯಸ್ಥರು ತಮ್ಮ ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಹಾಜರಾಗದೇ ಇರುವವರಿಗೆ ನೋಟಿಸ್ ನೀಡಲಾಗುವುದು ಎಂದು ಸೂಚಿಸಿದರು.

ಅತೀ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಿಕ್ಷಣ ಇಲಾಖೆ ನೋಡಿಕೊಳ್ಳಬೇಕು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಮತ್ತು ಪೆರೇಡ್‍ನಲ್ಲಿ ಭಾಗವಹಿಸುವ ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ಸಂಬಂಧಿಸಿದ ಇಲಾಖೆಗಳು ಒದಗಿಸಬೇಕು. ಪ್ಲಾಸ್ಟಿಕ್ ಧ್ವಜ ಮತ್ತು ಪ್ಲಾಸ್ಟಿಕ್ ಹೂಗುಚ್ಚಗಳನ್ನು ಮತ್ತು ಪ್ಲಾಸ್ಟಿಕ್ ನೀರಿನ ಬಾಟಲ್‍ಗಳನ್ನು ಯಾವುದೇ ಕಾರಣಕ್ಕೂ ತರುವಂತಿಲ್ಲ ಎಂದು ಖಡಕ್​ ಸೂಚನೆ ನೀಡಿದ್ದಾರೆ.

ಇನ್ನು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ನಿಯೋಜನೆ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ-2019ರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ಮಹಾನಗರ ಪಾಲಿಕೆ ವತಿಯಿಂದ ನೀಡಲಾಗಿರುವ ಸುರಕ್ಷತಾ ಪರಿಕರಗಳಾದ ಗಂಬೂಟ್ಸ್, ಹ್ಯಾಂಡ್‍ಗ್ಲೌಸ್‍ಗಳನ್ನು ಕಡ್ಡಾಯವಾಗಿ ಬಳಸಬೇಕು. ಅವರ ಆರೋಗ್ಯ ಹಿತದೃಷ್ಟಿಯಿಂದ ಅವುಗಳನ್ನು ಉಪಯೋಗಿಸಬೇಕು. ಪರಿಕರಗಳನ್ನು ಬಳಸದೇ ಸ್ವಚ್ಛತೆ ಕೆಲಸ ಮಾಡುತ್ತಿರುವುದು ಕಂಡು ಬಂದರೆ ಅವರ ವಿರುದ್ಧ ಕ್ರಮ ಕೈಗೊಂಡು ಅವರನ್ನು ಕೆಲಸದಿಂದ ವಜಾಗೊಳಿಸಲಾಗವುದು. ಇದಕ್ಕೆ ಯಾರೂ ವಿರೋಧ ಮಾಡುವಂತಿಲ್ಲ ಎಂದು ಸೂಚನೆ ನೀಡಿದರು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ಸಮೀಕ್ಷೆ ಕೆಲಸ ನಡೆಯುತ್ತಿದ್ದು, ತಾಲೂಕುಗಳಲ್ಲಿರುವ ಒಟ್ಟು ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್‍ಗಳ ಪಟ್ಟಿಯನ್ನು ಜ.16 ರೊಳಗೆ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿಸಬೇಕೆಂದು ತಾಲೂಕು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶಿವಾನಂದ ಕುಂಬಾರ್ ಮಾತನಾಡಿ, ಇಲ್ಲಿಯವರೆಗೂ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 156 ಕುಟುಂಬಗಳಿಗೆ ಸ್ವಯಂಘೋಷಣೆಯೊಂದಿಗೆ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ಗುರುತಿನ ಚೀಟಿ ನೀಡಲಾಗಿದೆ. ಹಾಗೂ 2019ರ ಅಕ್ಟೋಬರ್​ 24 ಮತ್ತು 25ರಂದು ಪಾಲಿಕೆಯಿಂದ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್‍ಗಳ ವಿಶೇಷ ಮರುಸಮೀಕ್ಷೆ ಕೈಗೊಂಡಿದ್ದು, ಸಮೀಕ್ಷೆ ಕಾರ್ಯವು ಪ್ರಗತಿಯಲ್ಲಿದೆ. ಪಾಲಿಕೆಯಿಂದ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್‍ಗಳ ಸ್ವ-ಉದ್ಯೋಗದ ಅನುಕೂಲಕ್ಕಾಗಿ 25 ಲಕ್ಷ ರೂ. ಮೀಸಲಿಡಲಾಗಿದೆ. ಮಹಾನಗರ ಪಾಲಿಕೆ ಸಮೀಕ್ಷೆಯಂತೆ ನಗರದಲ್ಲಿ ಯಾವುದೇ ಇನ್‍ಸ್ಯಾನಿಟರಿ ಲೆಟ್ರಿನ್‍ಗಳು (ತೆರೆದ ಮಲಗುಂಡಿ) ಇಲ್ಲ ಎಂದು ತಿಳಿಸಿದರು.

Intro:ದಾವಣಗೆರೆ : ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 71 ನೇ ಗಣರಾಜ್ಯೋತ್ಸವ ಪೂರ್ವಸಿದ್ದತೆ ಸಭೆಯು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

Body:ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ರಾಷ್ಟ್ರ ಹಬ್ಬವಾದ ಗಣರಾಜ್ಯೋತ್ಸವ ಅರ್ಥ ಪೂರ್ಣವಾಗಿರಲಿ. ದೇಶದ ಗಣರಾಜ್ಯಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರನ್ನು ನೆನೆಯುವ ದಿನ ಇದಾಗಿದ್ದು, ಅವರ ಶ್ರಮ ತ್ಯಾಗ, ಬಲಿದಾನಗಳಿಗೆ ನಾವು ಗೌರವ ಸಮರ್ಪಿಸೋಣ ಎಂದರು. ಅಂದು ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಲಿದೆ. ಎಲ್ಲಾ ಇಲಾಖಾ ಮುಖ್ಯಸ್ಥರು ತಮ್ಮ ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರೆವೇರಿಸಿ ಬೆಳಿಗ್ಗೆ 09 ಗಂಟೆಯೊಳಗಾಗಿ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಅಂದು ಯಾವುದೇ ಕಾರಣಕ್ಕೂ ಸರ್ಕಾರಿ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ರಜೆ ಎಂದು ಭಾವಿಸದೇ ತಪ್ಪದೇ ಹಾಜರಿರಬೇಕು. ಹಾಜರಾಗದೇ ಇರುವವರಿಗೆ ನೋಟಿಸ್ ನೀಡಲಾಗುವುದು.
10 ಸಾವಿರ ಜನರು ಕುಳಿತುಕೊಳ್ಳಲು ಸಾಮಥ್ರ್ಯವಿರುವ ಕ್ರೀಡಾಂಗಣ ಅಂದು ತುಂಬಬೇಕು. ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಿಕ್ಷಣ ಇಲಾಖೆ ನೋಡಿಕೊಳ್ಳಬೇಕು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಸಾಂಸ್ಕøತಿಕ ಕಾರ್ಯಕ್ರಮ ನೀಡುವ ಮತ್ತು ಪೆರೇಡ್‍ನಲ್ಲಿ ಭಾಗವಹಿಸುವ ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ಸಂಬಂಧಿಸಿದ ಇಲಾಖೆಗಳು ಒದಗಿಸಬೇಕು ಎಂದು ಸೂಚಿಸಿದರು.

ಪ್ಲಾಸ್ಟಿಕ್ ಧ್ವಜ ಮತ್ತು ಪ್ಲಾಸ್ಟಿಕ್ ಹೂಗುಚ್ಚಗಳನ್ನು ಮತ್ತು ಪ್ಲಾಸ್ಟಿಕ್ ನೀರಿನ ಬಾಟಲ್‍ಗಳನ್ನು ಯಾವುದೇ ಕಾರಣಕ್ಕೂ ತರುವಂತಿಲ್ಲ ಎಂದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ.ಜಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ಲೊ..Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.