ಹರಿಹರ: ಕೋವಿಡ್-19 ನಿಂದ ಸ್ಥಗಿತಗೊಂಡಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ನಡೆಸಲು ಶಿಕ್ಷಣ ಇಲಾಖೆ ಸಂಪೂರ್ಣ ತಯಾರಿಯನ್ನು ಮಾಡಿದೆ.
ತಾಲೂಕಿನ 4 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು ೧೮೧೫ ವಿದ್ಯಾರ್ಥಿಗಳು ಇಂಗ್ಲೀಷ್ ಪರೀಕ್ಷೆಯನ್ನು ಬರೆಯಲಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಪರೀಕ್ಷಾ ಕೇಂದ್ರದ ಕಟ್ಟಡವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ.
ನಗರದ ಧರಾಮ, ಎಸ್‌ಜೆವಿಪಿ, ಗಿರಿಯಮ್ಮ ಮಹಿಳಾ ಕಾಲೇಜು ಹಾಗೂ ಮಲೆಬೆನ್ನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಡಿಡಿಪಿಯು ನಾಗರಾಜ್ ತಿಳಿಸಿದರು.
ಪರೀಕ್ಷೆಯನ್ನು ಬರೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಬರಬೇಕಿದೆ. ಜೊತೆಗೆ ಪರೀಕ್ಷಾ ಕೇಂದ್ರಗಳಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್ ವ್ಯವಸ್ಥೆಯನ್ನು ಮಾಡಲಾಗಿದೆ. ಸಾಮಾಜಿಕ ಅಂತರ ಕಾಪಾಡುವ ದೃಷ್ಟಿಯಿಂದ ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಧರಾಮ ಕಾಲೇಜಿನ ಪ್ರಾಂಶುಪಾಲ ಭೀಮನಾಯ್ಕ್ ಮಾಹಿತಿ ನೀಡಿದ್ದಾರೆ.