ETV Bharat / state

ಕೊರೊನಾ ಹಿನ್ನೆಲೆ ಸರಳ ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ: ಡಿಸಿ ಮಹಾಂತೇಶ ಬೀಳಗಿ

author img

By

Published : Aug 5, 2020, 8:52 AM IST

ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಲಾ - ಕಾಲೇಜು ವಿದ್ಯಾರ್ಥಿಗಳು, ಎನ್‍ಸಿಸಿ, ಸ್ಕೌಟ್ ಮತ್ತು ಗೈಡ್ ಮಕ್ಕಳಿಗೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

DC Mahantesh Bilagi
ಸರಳ ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ: ಡಿಸಿ ಮಹಾಂತೇಶ ಬೀಳಗಿ

ದಾವಣಗೆರೆ: ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣದ ಹಿನ್ನೆಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೇಂದ್ರ ಗೃಹ ಸಚಿವಾಲಯ ನೀಡಿರುವ ಮಾರ್ಗಸೂಚಿ ಅನ್ವಯ ಸರಳವಾಗಿ, ಅಚ್ಚುಕಟ್ಟಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವೈರಸ್ ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಎನ್‍ಸಿಸಿ, ಸ್ಕೌಟ್ ಮತ್ತು ಗೈಡ್ ಮಕ್ಕಳಿಗೆ ಅವಕಾಶ ಇರುವುದಿಲ್ಲ.‌ ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಮತ್ತು ಸ್ಯಾನಿಟೈಸೇಷನ್ ನಿರ್ವಹಿಸಿ ಹೆಚ್ಚು ಜನರನ್ನು ಸೇರಿಸದೇ ಜಿಲ್ಲಾ ಮಟ್ಟದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕಿದೆ. ವಿದ್ಯಾರ್ಥಿಗಳಿಂದ ಬೆಳಗ್ಗೆ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಇರುವುದಿಲ್ಲ ಎಂದರು.

ಆ.15 ರ ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವರು ನೆರವೇರಿಸಲಿದ್ದು, ಈ ಬಾರಿ ಡಿಆರ್, ಸಿವಿಲ್, ಹೋಂ, ಅಬಕಾರಿ, ಅರಣ್ಯ ಮತ್ತು ಅಗ್ನಿ ಶಾಮಕದಳ ಒಟ್ಟು ಆರು ತಂಡಗಳು ಮಾತ್ರ ಪಥ ಸಂಚಲನದಲ್ಲಿ ಪಾಲ್ಗೊಳ್ಳಲಿವೆ. ಎನ್‍ಸಿಸಿ, ಸ್ಕೌಟ್ ಮತ್ತು ಗೈಡ್ ಇತರ ವಿದ್ಯಾರ್ಥಿಗಳ ತಂಡಗಳಿಗೆ ಅವಕಾಶ ಇರುವುದಿಲ್ಲ. ಧ್ವಜಾರೋಹಣದ ನಂತರ ಉಸ್ತುವಾರಿ ಸಚಿವರು ಸ್ವಾತಂತ್ರ್ಯ ದಿನದ ಕುರಿತು ಸಂದೇಶ ನೀಡುವರು. ಅಂದು ಕೋವಿಡ್ ಸೈನಿಕರಾದ ವೈದ್ಯರು, ಆರೋಗ್ಯ ಸಿಬ್ಬಂದಿ, ಕೋವಿಡ್ ಗುಣಮುಖರಾದವರು, ಪೌರಕಾರ್ಮಿಕರನ್ನು ಗೌರವಿಸಲಾಗುವುದು ಎಂದು ತಿಳಿಸಿದರು.

ಸರ್ಕಾರಿ ಕಟ್ಟಡಗಳ ಮೇಲೆ ದೀಪಾಲಂಕಾರ: ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ಆ.14 ಮತ್ತು 15 ರಂದು ವಿದ್ಯುತ್ ದೀಪಾಂಲಕಾರ ಮಾಡಲು ಆಯಾ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು. ನಗರದ ಮುಖ್ಯ ವೃತ್ತಗಳಾದ ಜಯದೇವ ವೃತ್ತ, ಹೊಂಡದ ವೃತ್ತ, ಗುಂಡಿ ವೃತ್ತ, ಗಾಂಧಿ ವೃತ್ತ, ರಾಮ್ & ಕೋ ವೃತ್ತ, ಕೆ.ಇ.ಬಿ ವೃತ್ತ, ಶಿವಪ್ಪ ವೃತ್ತ, ಹಗೆದಿಬ್ಬ ವೃತ್ತ, ಶಿವಾಜಿ ವೃತ್ತ ಅಂಬೇಡ್ಕರ್ ವೃತ್ತ ಸೇರಿ ಇತರ ವೃತ್ತಗಳಿಗೆ ದೀಪಾಲಂಕಾರ ಮಾಡಲು ನಿರ್ಧರಿಸಲಾಯಿತು.

ಪ್ಲಾಸ್ಟಿಕ್ ಧ್ವಜಗಳನ್ನು ಬಳಸುವಂತಿಲ್ಲ: ಅಂಗಡಿಗಳಲ್ಲಿ, ವ್ಯಾಪಾರ ವಹಿವಾಟು ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮತ್ತು ಬಳಕೆ ಮಾಡಿದಲ್ಲಿ ಅಂತಹವರ ವಿರುದ್ದ ಮಾಲಿನ್ಯ ನಿಯಂತ್ರಣ ಮಂಡಳಿಯವರು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಡಿಸಿ ಸೂಚನೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.