ETV Bharat / state

ದಾವಣಗೆರೆಯಲ್ಲಿ ಕನ್ನಡಪರ ಸಂಘಟನೆ ತಾಲೂಕು ಅಧ್ಯಕ್ಷ ಭೀಕರ ಹತ್ಯೆ - taluk president brutally murdered in davanagere

ಜಗಳೂರು ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ತಾಲೂಕಾಧ್ಯಕ್ಷ ರಾಮಕೃಷ್ಣ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಗ್ರಾಮ ಪಂಚಾಯತಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಇವರು ಹೋರಾಟಕ್ಕಿಳಿದಿದ್ದರು.

murder
ಕನ್ನಡಪರ ಸಂಘಟನೆ ತಾಲೂಕಾಧ್ಯಕ್ಷನ ಭೀಕರ ಹತ್ಯೆ
author img

By

Published : Jan 8, 2023, 9:40 AM IST

ದಾವಣಗೆರೆ: ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಹೊಸಕೆರೆ ಡಾಬಾ ಬಳಿ ತಡರಾತ್ರಿ ನಡೆದಿದೆ. ಗೌರಿಪುರ ಗ್ರಾಮದ ರಾಮಕೃಷ್ಣ (30) ಮೃತಪಟ್ಟಿರುವ ಕನ್ನಡಪರ ಹೋರಾಟಗಾರ. ಅರ್ಜುನ್ ಮತ್ತು ಪ್ರಶಾಂತ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜಗಳೂರು ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ತಾಲೂಧ್ಯಕ್ಷರಾಗಿದ್ದ ರಾಮಕೃಷ್ಣ, ಇತ್ತೀಚಿಗೆ ಗ್ರಾಮ ಪಂಚಾಯತಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಿದ್ದರು. ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಡಾಬಾದಲ್ಲಿ ಪಾರ್ಟಿ ವೇಳೆ ನಡೆದ ಗಲಾಟೆ: ಕೊಲೆಯಾದ ಜಗಳೂರಿನ ನಿವಾಸಿ ಹಾಗೂ ಕನ್ನಡ ಪರ ಹೋರಾಟಗಾರ ರಾಮಕೃಷ್ಣನನ್ನು ಆರೋಪಿಗಳಾದ ಅರ್ಜುನ್ ಮತ್ತು ಪ್ರಶಾಂತ್​ ಪಾರ್ಟಿ ಮಾಡಲು ಹೊಸಕೆರೆ ಡಾಬಾಕ್ಕೆ ಕರೆಯಿಸಿಕೊಂಡಿದ್ದಾರೆ. ಮದ್ಯದ ನಶೆಯಲ್ಲಿದ್ದ ಸ್ನೇಹಿತರ ನಡುವೆ ವಾಗ್ವಾದ ಉಂಟಾಗಿದೆ. ಆ ಬಳಿಕ ಗಲಾಟೆ ಕೋಪಕ್ಕೆ ತಿರುಗಿದೆ. ಈ ವೇಳೆ ಆರೋಪಿಗಳು ಕಬ್ಬಿಣದ ರಾಡ್ ಹಾಗು ಕಲ್ಲುಗಳಿಂದ‌ ಜಜ್ಜಿ ಡಾಬಾದಲ್ಲಿಯೇ ಹತ್ಯೆ ಮಾಡಿದ್ದಾರೆ. ಕೊಲೆ ಮಾಡಲು ಆರೋಪಿಗಳು ಪೂರ್ವನಿಯೋಜಿತರಾಗಿಯೇ ಬಂದಿದ್ದರು ಎಂಬ ಶಂಕೆಯನ್ನು ಪೊಲೀಸ್ ಮೂಲಗಳು ವ್ಯಕ್ತಪಡಿಸಿವೆ.

ಉದ್ಯೋಗ ಖಾತ್ರಿ ಭ್ರಷ್ಟಾಚಾರದ ವಿರುದ್ಧ ಹೋರಾಟ: ಇತ್ತೀಚೆಗೆ ಗ್ರಾಮ ಪಂಚಾಯತಿಯೊಂದರಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ರಾಮಕೃಷ್ಣ ಹೋರಾಟಕ್ಕಿಳಿದಿದ್ದರು. ಪಿಡಿಒ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಪ್ರಕರಣದಿಂದಲೇ ಅವರ ಕೊಲೆ ನಡೆದಿದೆಯೇ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸ್‌ ತನಿಖೆಯಿಂದ ಸತ್ಯಾಸತ್ಯತೆ ಹೊರಬರಬೇಕಿದೆ.

ಇದನ್ನೂ ಓದಿ: ಬೆಳಗಾವಿ - ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್​​: ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ

ನಿನ್ನೆ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಮುಖಂಡರ ಮೇಲೆ ಫೈರಿಂಗ್: ಇನ್ನೊಂದೆಡೆ, ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಮರಾಠಿ ಶಾಲೆಯ ಎದುರು ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಶ್ರೀರಾಮ ಸೇನೆ ಸಂಘಟನೆ ಮುಖಂಡರ ಮೇಲೆ ಫೈರಿಂಗ್ ಮಾಡಿ ಪರಾರಿಯಾದ ಘಟನೆ ನಿನ್ನೆ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್, ಕಾರು ಚಾಲಕ ಮನೋಜ್ ದೇಸೂರಕರ ಅವರನ್ನು ಸ್ಥಳೀಯರ ನೆರವಿನಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಹಾಡಹಗಲೇ ಫೈರಿಂಗ್​: ಉದ್ಯಮಿ ಮೇಲೆ‌ ದಾಳಿ, ಜಗಳ ನೋಡುತ್ತಿದ್ದವನ ಕಾಲು ಸೇರಿದ ಗುಂಡು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.