ದಾವಣಗೆರೆ: ಶಿಕ್ಷಣ ಸಂಶೋಧನೆಯಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಿದ್ದ ಸಂಶೋಧಕ ಹಾಗೂ ಪ್ರಾಧ್ಯಾಪಕ ಪ್ರೊ.ಮುರುಗಯ್ಯ ಕೋವಿಡ್ ಸೋಂಕು ತಗುಲಿ ಸಾವನ್ನಪ್ಪಿದ್ದಾರೆ.
ದಾವಣಗೆರೆ ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದ ಹಿರಿಯ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಮುರುಗಯ್ಯ, ಕಳೆದ ಕೆಲ ವರ್ಷಗಳ ಹಿಂದೆ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಕಳೆದೊಂದು ವಾರದಿಂದ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಇವರು, ಮನೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ದಾವಣಗೆರೆ ವಿವಿಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ.