ETV Bharat / state

ಆಗ್ನೇಯ ಪದವೀಧರರ ಚುನಾವಣೆ ಹಿನ್ನೆಲೆ : ಅ. 28ರಂದು ನಿಷೇಧಾಜ್ಞೆ ಜಾರಿ - Prohibition Enforcement in Davanagere district

ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಅ.28ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಾವಣಗೆರೆ, ಹರಿಹರ, ಜಗಳೂರು ತಾಲೂಕಿನಾದ್ಯಂತ ಅ.26ರ ಸಂಜೆ 5 ಗಂಟೆಯಿಂದ ಅ.28 ರ ಸಂಜೆ 05 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಆದೇಶಿಸಿದ್ದಾರೆ.

Mahantesh bilagi
Mahantesh bilagi
author img

By

Published : Oct 22, 2020, 8:07 PM IST

ದಾವಣಗೆರೆ: ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಅ.28ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ದಾವಣಗೆರೆ, ಹರಿಹರ, ಜಗಳೂರು ತಾಲೂಕಿನಾದ್ಯಂತ ಅ.26ರ ಸಂಜೆ 5 ಗಂಟೆಯಿಂದ ಅ.28 ರ ಸಂಜೆ 05 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಅವಧಿಯಲ್ಲಿ ಅ.28 ರಂದು ಮತದಾನ ಕೇಂದ್ರಗಳಿಗೆ ಮತ ಹಾಕಲು ಬರುವ ಮತದಾರರನ್ನು ಹೊರತುಪಡಿಸಿ ಉಳಿದಂತೆ 5 ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲೀ, ಮಾರಕಾಸ್ತ್ರಗಳು, ವಿನಾಶಕಾರಿ ವಸ್ತುಗಳನ್ನು ಒಯ್ಯುವಂತಿಲ್ಲ.

ಅಲ್ಲದೇ ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಯಾವುದೇ ಸಂಘಟನೆಗಳು, ರಾಜಕೀಯ ಪಕ್ಷಗಳು, ಧಾರ್ಮಿಕ ಪಂಗಡಗಳು ಮೆರವಣಿಗೆ, ಪ್ರತಿಭಟನೆ ನಡೆಸುವಂತಿಲ್ಲ.

ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು, ದೇವಸ್ಥಾನ, ಚರ್ಚ್, ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ, ಇನ್ನಿತರೆ ಸಮಾರಂಭಗಳನ್ನು ನಡೆಸಲು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಹಾಗೂ ಕಾರ್ಯಾಚರಣೆ ಅಧಿಕಾರಿಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.