ETV Bharat / state

ಬಯಲು ಸೀಮೆ ಕಾಮಗಾರಿ ಪೂರ್ಣಗೊಳಿಸಲು ಅನುದಾನ ನೀಡುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ

ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ 1,724 ಕಾಮಗಾರಿಗಳು ಪ್ರಗತಿಯಲ್ಲಿದ್ದು ಕಾಮಗಾರಿ ಪೂರ್ಣಗೊಳಿಸುವ ಉದ್ದೇಶದಿಂದ ಅನುದಾನ ಬಿಡುಗಡೆ ಮಾಡುವಂತೆ ಕೋರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

Bayaluseeme
ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ
author img

By

Published : Jan 21, 2021, 7:21 AM IST

ದಾವಣಗೆರೆ: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ 1,724 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಕಾಮಗಾರಿಗಳನ್ನು ಪೂರ್ಣಗೊಳಿಸುವ ಸಲುವಾಗಿ ಪ್ರಸಕ್ತ ವರ್ಷದಲ್ಲಿ 67. 67 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎನ್.ಇ. ಜೀವನ್​ಮೂರ್ತಿ ಹೇಳಿದರು.

ಜಗಳೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಏರ್ಪಡಿಸಿದ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಡಾ. ಬಿ.ಎಂ ನಂಜುಂಡಪ್ಪ ವರದಿಯ ಆಧಾರ ಮೇಲೆ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯು 1995ರಿಂದ ಜಾರಿಗೆ ಬಂದಿದ್ದು, ಕಡಿಮೆ ಮಳೆಯ ಕಾರಣ ಪದೇ ಪದೆ ಬರ ಪರಿಸ್ಥಿತಿ ಎದುರಿಸುವ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯ ಕೈಗೊಂಡು ಅಸಮತೋಲನ ನಿವಾರಣೆಗಾಗಿ ಮಂಡಳಿ ರಚನೆಯಾಗಿದೆ. ಈ ಪ್ರದೇಶಗಳ ಕೃಷಿ ಸಂಬಂಧಿತ ಚಟುವಟಿಕೆಗಳಾದ ಕೃಷಿ, ತೋಟಗಾರಿಕೆ, ಅರಣ್ಯ, ಪಶು ಸಂಗೋಪನೆ, ಮಣ್ಣು ಮತ್ತು ನೀರು ಸಂರಕ್ಷಣಾ ಕಾಮಗಾರಿಗಳಿಗೆ, ಅದರಲ್ಲೂ ಪ್ರಮುಖವಾಗಿ ಈ ಭಾಗದ ವ್ಯಾಪ್ತಿಯಲ್ಲಿ ಅಂತರ್ಜಲ ಹೆಚ್ಚಳಕ್ಕೆ ಪ್ರಮುಖ ಆದ್ಯತೆ ನೀಡಲಾಗುತ್ತಿದೆ ಎಂದರು.

ರಾಜ್ಯದ ಬಾಗಲಕೋಟೆ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಹಾಸನ, ಹಾವೇರಿ, ಕೋಲಾರ, ರಾಮನಗರ, ತುಮಕೂರು, ವಿಜಯಪುರ ಜಿಲ್ಲೆ ಸೇರಿದಂತೆ ಒಟ್ಟು 14 ಜಿಲ್ಲೆಗಳನ್ನೊಳಗೊಂಡ 58 ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ 70 ವಿಧಾನಸಭಾ ಕ್ಷೇತ್ರಗಳು ಮಂಡಳಿಯ ವ್ಯಾಪ್ತಿಗೆ ಒಳಪಟ್ಟಿವೆ. 14 ಲೋಕಸಭಾ ಸದಸ್ಯರು, 70 ವಿಧಾನಸಭಾ ಸದಸ್ಯರು, 24 ವಿಧಾನಪರಿಷತ್ತು ಸದಸ್ಯರು, 10 ಮಂಡಳಿಯ ನಾಮನಿರ್ದೇಶಿತ ಸದಸ್ಯರು, 14 ಜಿಲ್ಲಾ ಪಂಚಾಯತ್ ಸದಸ್ಯರು, 14 ಜಿಲ್ಲಾಧಿಕಾರಿಗಳು ಹಾಗೂ ಒಬ್ಬ ಕಾರ್ಯದರ್ಶಿ ಸೇರಿದಂತೆ ಒಟ್ಟು 147 ಮಂದಿ ಮಂಡಳಿಯ ಸದಸ್ಯರಿದ್ದಾರೆ. ಮಂಡಳಿ ವ್ಯಾಪ್ತಿಯಲ್ಲಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಮಾತ್ರ ಬರಲಿದ್ದು, ಈ ಭಾಗದಲ್ಲಿ ಮಳೆಯ ಕೊರತೆ ಅಲ್ಲದೇ ಶಾಶ್ವತ ನೀರಿನ ಯಾವುದೇ ಮೂಲ ಲಭ್ಯವಿಲ್ಲ. ಹೀಗಾಗಿ ಈ ಭಾಗದಲ್ಲಿ ನೀರಿನ ಕೊರತೆ ಕಾಡುವುದು ಸಹಜ. ಹೀಗಾಗಿ ಇಲ್ಲಿ ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.

ಮಣ್ಣು ಮತ್ತು ನೀರು ಸಂರಕ್ಷಣಾ ಕಾಮಗಾರಿಗಳಲ್ಲಿ ವಿವಿಧೋದ್ದೇಶದಿಂದ ಕೂಡಿದ ಕಾಮಗಾರಿಗಳು ಅಂದರೆ ಸುತ್ತಮುತ್ತಲ ಜಮೀನುಗಳ ಬೋರ್‍ವೆಲ್‍ಗಳನ್ನು ರೀಜಾರ್ಚ್ ಮಾಡಲು, ದನ ಕರುಗಳಿಗೆ ನೀರಿನ ವ್ಯವಸ್ಥೆ ಮತ್ತು ಸಾರ್ವಜನಿಕರ ಉಪಯೋಗಕ್ಕಾಗಿ ಊರಿಂದ ಊರಿಗೆ ಸಂಪರ್ಕ ಕಲ್ಪಿಸಿ ಸಂಚರಿಸಲು ಅನುಕೂಲ ಕಲ್ಪಿಸುವಂತಹ ಕಾಮಗಾರಿಗಳು, ಸರ್ಕಾರಿ ಜಮೀನುಗಳಲ್ಲಿ ಚೆಕ್‍ಡ್ಯಾಂ ನಿರ್ಮಾಣ, ಸಣ್ಣ ಕೆರೆಗಳ ಬದು ಮತ್ತು ಕೋಡಿ ನಿರ್ಮಾಣ, ಮಳೆ ನೀರು ತಡೆಗೋಡೆ, ಗೋಕಟ್ಟೆ ನಿರ್ಮಾಣ, ಕಲ್ಯಾಣಿಗಳ ಜೀರ್ಣೋದ್ಧಾರ ಮುಂತಾದ ಕಾಮಗಾರಿಗಳು, ಸರ್ಕಾರಿ ಜಾಗಗಳಲ್ಲಿ ಕಿರು ಕಾಲುವೆಗಳು ಇಂಗು ಗುಂಡಿ ನಿರ್ಮಿಸಿ ಅಂತರ್ಜಲ ಹೆಚ್ಚಿಸುವ ಕಾಮಗಾರಿಗಳು ಇತ್ಯಾದಿ, ಅರಣ್ಯೀಕರಣ, ತೋಟಗಾರಿಕೆ, ಸಮುದಾಯ ಕೃಷಿ ಕಾಮಗಾರಿಗಳು, ರಸ್ತೆ ನಿರ್ಮಾಣ, ಚರಂಡಿ ನಿರ್ಮಾಣ ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಮಂಡಳಿ ವ್ಯಾಪ್ತಿಯಲ್ಲಿ ಆದ್ಯತೆಯ ಮೇರೆಗೆ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

2020-21ನೇ ಸಾಲಿನ ಆಯವ್ಯಯದಲ್ಲಿ ಮಂಡಳಿಗೆ 22.73 ಕೋಟಿ ರೂ. ಆರ್ಥಿಕ ಗುರಿ ನಿಗದಿಪಡಿಸಲಾಗಿತ್ತು. ಮಂಡಳಿಗೆ ಲಭ್ಯವಾದ 16.69 ಕೋಟಿ ರೂ. ಅನುದಾನದಲ್ಲಿ 16.05 ಕೋಟಿ ರೂ. ವೆಚ್ಚವಾಗಿದ್ದು 196 ಕಾಮಗಾರಿಗಳು ಪೂರ್ಣಗೊಂಡಿವೆ. ಇನ್ನೂ 1724 ಕಾಮಗಾರಿಗಳು ಪ್ರಗತಿಯಲ್ಲಿದ್ದು, ವಿವಿಧ ಹಂತದಲ್ಲಿವೆ. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು 85.22 ಕೋಟಿ ರೂ. ಗಳ ಅಗತ್ಯವಿದ್ದು, ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಸಾಮಾನ್ಯ ಯೋಜನೆಯಡಿ ನಿಗದಿಪಡಿಸಿದ ಅನುದಾನ 16.72 ಕೋಟಿ ರೂ. ಹಾಗೂ ಆರಂಭಿಕ ಶುಲ್ಕ ರೂ.83 ಲಕ್ಷ ಸೇರಿ ಒಟ್ಟಾರೆ 17.55 ಕೋಟಿ ರೂ. ಗಳನ್ನು ಬಳಸಿಕೊಂಡರೂ 67.67 ಕೋಟಿ ರೂ. ಗಳ ಅನುದಾನದ ಕೊರತೆಯಾಗುತ್ತದೆ. ಹೀಗಾಗಿ ಅನುದಾನ ಬಿಡುಗಡೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 67.67 ಕೋಟಿ ರೂ. ಗಳ ಅನುದಾನವನ್ನು ಇದೇ ಆರ್ಥಿಕ ವರ್ಷದಲ್ಲಿ ಒದಗಿಸಿದಲ್ಲಿ ಬಾಕಿ ಇರುವ ಯೋಜನೆಗಳು ಪೂರ್ಣಗೊಳ್ಳಲಿವೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.