ದಾವಣಗೆರೆ : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಮೋಟಾರು ವಾಹನ ಕಾಯ್ದೆ ವಿರೋಧಿಸಿ ಜಗಳೂರು ಪಟ್ಟಣದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಯಿತು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕೃತಿ ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ನೂತನ ಮೋಟಾರು ವಾಹನ ಕಾಯ್ದೆಯನ್ವಯ ಸವಾರರಿಗೆ ಅವೈಜ್ಞಾನಿಕವಾಗಿ ದಂಡ ವಿಧಿಸಲಾಗುತ್ತಿದೆ. ಇದರಿಂದ ರೈತರು, ಬಡವರು, ಕೂಲಿ ಕಾರ್ಮಿಕರು, ಸಾಮಾನ್ಯ ಜನರು ಭಾರೀ ತೊಂದರೆ ಅನುಭವಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.