ದಾವಣಗೆರೆ: ವಿದ್ಯುತ್ ಬಿಲ್ ದುಪ್ಪಟ್ಟು ಬಂದಿರುವುದನ್ನು ವಿರೋಧಿಸಿ ಜೆಡಿಎಸ್ ಪಕ್ಷದ ನೇತೃತ್ವದಲ್ಲಿ ಇಂದು ಸ್ಥಳೀಯರು ಪ್ರತಿಭಟನೆ ನಡೆಸಿದರು.
ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಜನರುಸಂಕಷ್ಟದಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪ್ರತಿ ತಿಂಗಳು ಬರುತ್ತಿದ್ದ ಬಿಲ್ಗಿಂತ ಹೆಚ್ಚಿನ ದರ ಬರುತ್ತಿದೆ. ಇದಕ್ಕೆ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದರು. ಕಳೆದ ಮೂರು ತಿಂಗಳಲ್ಲಿ ಕೊರೊನಾ ಹಿನ್ನೆಲೆ ಕೆಲ ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಹಾಗೂ ಸೀಲ್ಡೌನ್ ಮಾಡಲಾಗಿದೆ. ಕೆಲಸವಿಲ್ಲದೆ, ಕೈಯಲ್ಲಿ ಹಣ ಇಲ್ಲದೆ ಪರದಾಡುತ್ತಿದ್ದೇವೆ. ಹೆಚ್ಚಿನ ಬಿಲ್ ಬಂದರೆ ಪಾವತಿಸುವುದಾದರೂ ಹೇಗೆ ಎಂದು ಪ್ರಶ್ನಿಸಿದರು.