ETV Bharat / state

ಶಿಷ್ಯ ವೇತನ ಸಿಗದ ಹೊರತು ಪ್ರತಿಭಟನೆ ನಿಲ್ಲಿಸಲ್ಲ: ವಿದ್ಯಾರ್ಥಿಗಳ ಎಚ್ಚರಿಕೆ - protest by studnet

ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಮುಷ್ಕರ ಕೈಬಿಡದಿದ್ದರೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಅಡಿ ಮತ್ತೆ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಿದ್ದರೂ ವಿದ್ಯಾರ್ಥಿಗಳು ಕ್ಯಾರೇ ಎಂದಿಲ್ಲ.

protest
protest
author img

By

Published : Jul 2, 2020, 5:36 PM IST

ದಾವಣಗೆರೆ: ನಗರದ ಜಯದೇವ ವೃತ್ತದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಜೆಜೆಎಂ ಮೆಡಿಕಲ್‌ ಕಾಲೇಜಿನ‌ ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನ ಪೂರೈಸಿದೆ.

ವಿದ್ಯಾರ್ಥಿಗಳ ಪ್ರತಿಭಟನೆ

ಶಿಷ್ಯ ವೇತನಕ್ಕೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಧರಣಿ ನಡೆಸುತ್ತಿರುವ ವಿದ್ಯಾರ್ಥಿಗಳು ಮುಷ್ಕರ ಮುಂದುವರೆಸಿದ್ದಾರೆ. ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಮುಷ್ಕರ ಕೈಬಿಡದಿದ್ದರೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಅಡಿ ಮತ್ತೆ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಿದ್ದರೂ ವಿದ್ಯಾರ್ಥಿಗಳು ಕ್ಯಾರೇ ಎಂದಿಲ್ಲ.

protest in davanagere
ವಿದ್ಯಾರ್ಥಿಗಳ ಪ್ರತಿಭಟನೆ

ಕಳೆದ ಹದಿನಾರು ತಿಂಗಳಿಂದ ಶಿಷ್ಯ ವೇತನ ಬಾರದ ಕಾರಣ ನಮ್ಮ ಜೀವನವೇ ಕಷ್ಟವಾಗಿದೆ. ಮುಷ್ಕರದ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದೇವೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ನಾವು ಭಾಗಿಯಾಗುತ್ತಿದ್ದೇವೆ. ನಿತ್ಯವೂ ಕೆಲಸ ಮಾಡುತ್ತಿದ್ದೇವೆ. ಬಳಿಕ ನಾವು ಇಲ್ಲಿಗೆ ಬಂದು ಪ್ರತಿಭಟನೆ ನಡೆಸುತ್ತಿದ್ದೇವೆ. ಶಿಷ್ಯ ವೇತನ ಸಿಗುವವರೆಗೆ ಹೋರಾಟ ನಿಲ್ಲದು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ನಾಳೆಯೂ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.