ದಾವಣಗೆರೆ: ಖ್ಯಾತ ವಕೀಲ ಪ್ರಶಾಂತ್ ಭೂಷಣ್ ವಿರುದ್ಧ ನೀಡಿರುವ ನ್ಯಾಯಾಂಗ ನಿಂದನೆ ತೀರ್ಪನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಜನಾಂದೋಲನ ಮಹಾಮೈತ್ರಿ ಸಮಿತಿಯ ಸದಸ್ಯರು ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಕೀಲರು ಹಾಗೂ ಮಹಾಮೈತ್ರಿ ಸಮಿತಿಯ ಸದಸ್ಯರು, ಪ್ರಶಾಂತ್ ಭೂಷಣ್ ಅವರ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ದುರುದ್ದೇಶಪೂರಿತವಾಗಿದೆ ಎಂದು ಆರೋಪಿಸಿದರು.
ನಾವು ಗಂಭೀರ ಕಾಳಜಿಯಿಂದ ಗಮನಿಸುತ್ತಿದ್ದೇವೆ. ನ್ಯಾಯಾಲಯವು ಈ ಪ್ರಕರಣವನ್ನು ಮರು ಪರಿಶೀಲಿಸಬೇಕು. ನ್ಯಾಯಾಂಗ ನಿಂದನೆಯ ತೀರ್ಪನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.