ದಾವಣಗೆರೆ: ಕುರುಬ ಸಮುದಾಯದ ಶ್ರೀಗಳನ್ನು ನಿಂದಿಸಿದ್ದಾರೆಂದು ಆರೋಪಿಸಿ ಸಚಿವ ಮಾಧುಸ್ವಾಮಿ ವಿರುದ್ಧ ಹೊನ್ನಾಳಿಯಲ್ಲಿ ಕುರುಬ ಸಮುದಾಯದಿಂದ ಪ್ರತಿಭಟನೆ ನಡೆಯಿತು.
ಹೊನ್ನಾಳಿ ತಾಲೂಕು ಪಂಚಾಯತ್ ಎದುರು ಪ್ರತಿಭಟನೆ ನಡೆಸಿದ ಹಾಲುಮತ ಮಹಾಸಭಾದ ಮುಖಂಡರು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ನಾಶ ಮಾಡಲು ಮಾಧುಸ್ವಾಮಿ ಒಬ್ಬರೇ ಸಾಕು. ಕೂಡಲೇ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಅಥವಾ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಹಾಲುಮತ ಮಹಾಸಭಾ ವತಿಯಿಂದ ದಾವಣಗೆರೆ ಜಿಲ್ಲೆ ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಚಿವ ಮಾಧುಸ್ವಾಮಿ ಕುರುಬ ಸಮುದಾಯದ ನಿರಂಜನಾನಂದಪುರಿ ಸ್ವಾಮೀಜಿ ಬಗ್ಗೆ ಉದ್ಧಟತನದ ಮಾತುಗಳನ್ನು ಆಡಿದ್ದಾರೆ ಎಂದು ಆರೋಪಿಸಲಾಗಿದೆ.