ದಾವಣಗೆರೆ: ದೇಶದಲ್ಲಿ ಕೊರೊನಾ ವೈರಸ್ ಹರಡದಂತೆ ತಡೆಯಲು ಲಾಕ್ಡೌನ್ ಆದೇಶವನ್ನ ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು. ತಾಲೂಕು ಆಡಳಿತದಿಂದ ಅಗತ್ಯ ವಸ್ತುಗಳ ಸರಬರಾಜಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಶಾಸಕ ಎಸ್.ರಾಮಪ್ಪ ತಿಳಿಸಿದ್ದಾರೆ.
ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್‌ನಿಂದ ವಿಶ್ವದ ಅನೇಕ ರಾಷ್ಟ್ರಗಳು ತೀವ್ರ ಸಂಕಷ್ಟದಲ್ಲಿವೆ. ಸಾವಿರಾರು ಜನ ಜೀವ ಕಳೆದುಕೊಂಡಿದ್ದಾರೆ, ಜನಜೀವನ ಅಸ್ತವ್ಯಸ್ತವಾಗಿದೆ. ಸಾರ್ವಜನಿಕರು ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಈ ಮಹಾಮಾರಿಯನ್ನು ಹರಡದಂತೆ ತಡೆಗಟ್ಟಲು ಸಹಕರಿಬೇಕು. ಅಲ್ಲದೆ,ನಗರದ 31ನೇ ವಾರ್ಡ್‌ಗಳ ನಗರಸಭೆ ಸದಸ್ಯರು ತಮ್ಮ ವಾರ್ಡ್‌ಗಳಲ್ಲಿ ಜಾಗೃತಿ ಮೂಡಿಸುವ ಜತೆಗೆ ಅಗತ್ಯ ವಸ್ತುಗಳ ಸರಬರಾಜಿಗೆ ಜಾಗಗಳನ್ನು ಗುರುತಿಸಿ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದರು.