ಹರಿಹರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ ಆಗಿರುವುದರಿಂದ ಮನನೊಂದು, ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಫಕ್ಕೀರಸ್ವಾಮಿ ಮಠದ ಸಮೀಪದ ನಿವಾಸಿಯಾದ ಆಟೋ ಚಾಲಕ ಕೊಟ್ರೇಶ್ ಎಂಬುವವರ ಹಿರಿಯ ಮಗ ಜಯರಾಂ ನೇಕಾರ (18) ಎಂಬ ಯುವಕ. ಈತ ಎಂಕೆಇಟಿ ಕಾಲೇಜಿನಲ್ಲಿ ದ್ವೀತಿಯ ಪಿಯುಸಿ ವಿಜ್ಞಾನ ವಿಷಯದ ವಿದ್ಯಾರ್ಥಿಯಾಗಿದ್ದ.
ಇಂದು ಫಲಿತಾಂಶ ಬಂದಿದ್ದು, ಪರೀಕ್ಷೆಯಲ್ಲಿ ಅನುತ್ತೀರ್ಣ ಆಗಿದ್ದಾನೆ. ಇದರಿಂದ ಮನನೊಂದ ವಿದ್ಯಾರ್ಥಿಯು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸರು ಶವವನ್ನು ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.