ದಾವಣಗೆರೆ: ಬಿಜೆಪಿ ಅಭ್ಯರ್ಥಿ ಜಿಎಂ ಸಿದ್ದೇಶ್ವರ್ ಎದುರು ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ರಾಹುಲ್ ಎಂದು ಘೋಷಣೆ ಕೂಗಿದ್ದರಿಂದ ಬಿಜೆಪಿ ಮುಖಂಡರು ಮುಜುಗರ ಎದುರಿಸಿದ ಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯಿತು.
ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಕುಟುಂಬ ಸದಸ್ಯರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಸಿದ್ದೇಶ್ವರ್ ನಾಮಪತ್ರ ಸಲ್ಲಿಸಲು ಆಗಮಿಸಿದ್ದರು. ಈ ವೇಳೆ ಅಲ್ಲಿಯೇ ಇದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಚೌಕಿದಾರ್ ಮೋದಿ ಚೋರ್, ಚೌಕಿದಾರ್ ಚೋರ್ ಹೈ ಕೂಗಿದರು.
ಇದರಿಂದ ಸಿದ್ದೇಶ್ವರ್ ಅವರಿಗೆ ಪೆಚ್ಚು ಮೋರೆ ಇಡುವಂತ ಪರಿಸ್ಥಿತಿ ನಿರ್ಮಾಣವಾಯಿತು. ಬಳಿಕ ಪೊಲೀಸ್ ಭದ್ರತೆಯಲ್ಲಿ ಸಿದ್ದೇಶ್ವರ್ ಅವರನ್ನು ಜಿಲ್ಲಾಧಿಕಾರಿ ಕಚೇರಿ ಒಳಗೆ ಕಳುಹಿಸಿದ ಪ್ರಸಂಗವೂ ನಡೆಯಿತು.