ಹರಿಹರ: ಹರಿಹರದಲ್ಲಿ ಮೇ 31ರವರೆಗೂ ಬೆಳಗ್ಗೆ 7ರಿಂದ ಮಧ್ಯಾಹ್ನ 2 ಗಂಟೆ ತನಕ ವ್ಯಾಪಾರ ವಹಿವಾಟು ನಡೆಸಲು ತೀರ್ಮಾನಿಸಲಾಗಿದೆ ಎಂದು ವಿತರಕರ ಸಂಘದ ಅಧ್ಯಕ್ಷ ಎಚ್.ಎಸ್.ಶ್ರೀಧರ್ಮೂರ್ತಿ ತಿಳಿಸಿದ್ದಾರೆ.
ನಗರದಲ್ಲಿ ವಿತರಕರು, ಸಗಟು, ಚಿಲ್ಲರೆ, ಕಿರಾಣಿ ಅಂಗಡಿ ವರ್ತಕರು ಹಾಗೂ ಪುಸ್ತಕ ವ್ಯಾಪಾರಿಗಳು ನಡೆಸಿದ ಸಭೆಯಲ್ಲಿ ಈ ತೀರ್ಮಾನ ತೆಗದುಕೊಳ್ಳಲಾಗಿದೆ ಎಂದರು.
ದಾವಣಗೆರೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಪರಿಣಾಮ ಈ ನಿರ್ಧಾರಕ್ಕೆ ಬರಲಾಗಿದೆ. ವ್ಯಾಪಾರದ ಸಂದರ್ಭದಲ್ಲಿ ಸರ್ಕಾರದ ಸೂಚನೆಯಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಹೇಳಿದರು.