ETV Bharat / state

ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸವಿದ ರೇಣುಕಾಚಾರ್ಯ: ಶಾಸಕರಿಂದ ಮಕ್ಕಳಿಗೆ ಕೊರೊನಾ ಜಾಗೃತಿ - ದಾವಣಗೆರೆಯಲ್ಲಿ ಕೊರೊನಾ ಬಗ್ಗೆ ರೇಣುಕಾಚಾರ್ಯ ಜಾಗೃತಿ

ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ ರೇಣುಕಾಚಾರ್ಯ ತಮ್ಮದೇ ಶೈಲಿಯಲ್ಲಿ ಶಾಲೆಯ ಮಕ್ಕಳಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

renukacharya-gave-awareness-about-corona-to-childrens-in-davanagere
ಮಕ್ಕಳೊಂದಿಗೆ ಊಟ ಮಾಡಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ ರೇಣುಕಾಚಾರ್ಯ
author img

By

Published : Jan 17, 2022, 6:10 PM IST

ದಾವಣಗೆರೆ: ಶಾಲೆ-ಕಾಲೇಜುಗಳಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಹೆಚ್ಚಿದೆ‌. ಈ ನಿಟ್ಟಿನಲ್ಲಿ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ತಮ್ಮದೇ ಶೈಲಿಯಲ್ಲಿ ಶಾಲೆಯ ಮಕ್ಕಳಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಮಕ್ಕಳೊಂದಿಗೆ ಊಟ ಮಾಡಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ ರೇಣುಕಾಚಾರ್ಯ

ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಬಿಸಿಯೂಟ ಸವಿದ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಮಕ್ಕಳಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದರು. ‌ಹೊನ್ನಾಳಿ ತಾಲೂಕಿನ ಹನಗವಾಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳೊಂದಿಗೆ ಮಧ್ಯಾಹ್ನನದ ಬಿಸಿಯೂಟ ಸೇವಿಸಿ ಕೆಲ ಕಾಲ ಮಕ್ಕಳೊಂದಿಗೆ ಕಾಲ ಕಳೆದರು.

ಆಹಾರ ಪದಾರ್ಥಗಳು, ಶಾಲೆ, ಮಕ್ಕಳ ಹಾಜರಾತಿ ಪರಿಶೀಲಿಸಿದ ಅವರು, ಶಾಲೆಯಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಮಕ್ಕಳಿಗೆ ಉತ್ತಮ ಗುಣಮಟ್ಟದ ಆಹಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಶಾಲೆಯ ಮಕ್ಕಳು ಶಾಸಕರೊಂದಿಗೆ ಊಟ ಮಾಡಿ ಸಂತಸಪಟ್ಟರು.

ಓದಿ: ಆತ್ಮ ನಿರ್ಭರ ಭಾರತ ಯೋಜನೆ.. ರಾಜ್ಯ ಸರ್ಕಾರದಿಂದ ಶೇ.15 ರಷ್ಟು ಹೆಚ್ಚುವರಿ ಸಹಾಯಧನ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.