ದಾವಣಗೆರೆ: ಕ್ಯಾನ್ಸರ್ ಪೀಡಿತ ರೋಗಿಯೊಬ್ಬರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಹಾಯ ಹಸ್ತ ಚಾಚಿದ್ದಾರೆ.
ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದ ಹಿಂದುಳಿದ ವರ್ಗದ ಮುಖಂಡ ಎ.ಬಿ.ಹನುಮಂತಪ್ಪ ಎಂಬುವರು ಕಳೆದ ಕೆಲ ದಿನಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಲಾಕ್ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾಗಿದ್ದರು. ಅವರನ್ನು ಮಲೆಕುಂಬಳೂರು ಗ್ರಾಮಕ್ಕೆ ವಾಪಸ್ ಕರೆದುಕೊಂಡು ಬರಲಾಗಿದೆ.
ಲಾಕ್ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಹನುಮಂತಪ್ಪ ಅವರಿಗೆ ಔಷಧ ಸಿಕ್ಕಿರಲಿಲ್ಲ. ಮುಂಬೈನಿಂದ ಔಷಧ ತರಿಸಬೇಕಾದ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಹನುಮಂತಪ್ಪರ ಪುತ್ರಿ ನಿಖಿತಾ ತಂದೆಯ ಚಿಕಿತ್ಸೆಗಾಗಿ ವಿಡಿಯೋ ಮೂಲಕ ಮನವಿ ಮಾಡಿದ್ದರು. ಈ ವಿಷಯ ನನಗೆ ತಿಳಿದ ಬಳಿಕ ಕಷ್ಟಕ್ಕೆ ಸ್ಪಂದಿಸಿದ್ದೇನೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ದಾವಣಗೆರೆಯ ಎಸ್.ಎಸ್ ಹಾಸ್ಪಿಟಲ್ನಲ್ಲಿ ತುರ್ತು ಚಿಕಿತ್ಸೆ ಕೊಡಿಸಿ ಮಲೆಕುಂಬಳೂರು ಗ್ರಾಮದ ಹನುಮಂತಪ್ಪರ ಮನೆಗೆ ತಹಶೀಲ್ದಾರ್ ಜೊತೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದೇನೆ. ಅವರಿಗೆ ಆತ್ಮಸ್ಥೈರ್ಯ ತುಂಬಿ ಹೆಚ್ಚಿನ ಚಿಕಿತ್ಸೆಗೆ ಸ್ಪಂದಿಸುವ ಭರವಸೆ ನೀಡಿರುವುದಾಗಿ ರೇಣುಕಾಚಾರ್ಯ ತಿಳಿಸಿದ್ದಾರೆ.