ETV Bharat / state

ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಹಳ್ಳಿ ಹಳ್ಳಿ ಸುತ್ತುತ್ತಿರುವ ರೇಣುಕಾಚಾರ್ಯ...! - District Collector Mahantesh R. Drop down

ಹೊನ್ನಾಳಿ ತಾಲೂಕಿನ ಕುಂದೂರು, ಕೂಲಂಬಿ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.‌ಪಿ. ರೇಣುಕಾಚಾರ್ಯ , ಕೊರೊನಾ ವೈರಸ್ ಸೋಂಕು ದಿನೇ ದಿನೇ ಜಾಸ್ತಿಯಾಗುತ್ತಿದ್ದು, ಮನೆಯಿಂದ ಯಾರೂ ಹೊರಬರಬಾರದು ಎಂದು ಮನವಿ ಮಾಡಿದ್ದಾರೆ.

Renukacharya
ರೇಣುಕಾಚಾರ್ಯ
author img

By

Published : Mar 30, 2020, 12:52 PM IST

ದಾವಣಗೆರೆ: ಹೊನ್ನಾಳಿ ತಾಲೂಕಿನಲ್ಲಿ ಜನರಲ್ಲಿ ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲು ಹಳ್ಳಿ ಹಳ್ಳಿ ಸುತ್ತುತ್ತಿದ್ದಾರೆ.

ರೇಣುಕಾಚಾರ್ಯ
ಹೊನ್ನಾಳಿ ತಾಲೂಕಿನ ಕುಂದೂರು, ಕೂಲಂಬಿ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಅವರು, ಕೊರೊನಾ ವೈರಸ್ ಸೋಂಕು ದಿನೇ ದಿನೇ ಜಾಸ್ತಿಯಾಗುತ್ತಿದ್ದು, ಮನೆಯಿಂದ ಯಾರೂ ಹೊರಬರಬಾರದು ಎಂದು ಮನವಿ ಮಾಡಿದರು. ಲಾಕ್ ಡೌನ್ ಆಗಿರುವ ಕಾರಣ ದಿನಸಿ ಸೇರಿದಂತೆ ಇತರೆ ವಸ್ತುಗಳ ಖರೀದಿಗೆ ಪರದಾಡುವಂತಾಗಿದೆ. ಕೆಲ ಅಂಗಡಿಗಳಲ್ಲಿ ಹೆಚ್ವಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಹಲವೆಡೆ ಒತ್ತಾಯ ಕೇಳಿ ಬಂತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ಕೊಡಲಾಗಿದೆ. ಮತ್ತೊಮ್ಮೆ ಈ ಬಗ್ಗೆ ಮಾತನಾಡಿ ಇದಕ್ಕೆ ಕಡಿವಾಣ ಹಾಕಲಾಗುವುದು ಎಂದು ಭರವಸೆ ನೀಡಿದರು. ಮನೆಯಿಂದ ಹೊರಬರಬೇಕಾದರೆ ಮುಖಕ್ಕೆ ಮಾಸ್ಕ್ ಇಲ್ಲವೇ ಬಟ್ಟೆ ಕಟ್ಟಿಕೊಳ್ಳಿ. ತುರ್ತು ಕೆಲಸ ಇದ್ದರೆ ಮಾತ್ರ ಹೊರ ಬನ್ನಿ. ವಿನಾಕಾರಣ ಹೊರಗಡೆ ಓಡಾಡಬೇಡಿ ಎಂದು ಮನವಿ ಮಾಡಿದ ಅವರು, ಯಾರಿಗೂ ಹಸ್ತಲಾಘವ ಮಾಡದೇ ಕೈ ಮುಗಿದು ಕಾರಿನಲ್ಲಿ ಕುಳಿತು ವಿನಂತಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.