ETV Bharat / state

ಪಂಚಮಸಾಲಿ ಸಮುದಾಯಕ್ಕೆ 2ಎ ವರ್ಗದಡಿ ಮೀಸಲಾತಿ ಕಲ್ಪಿಸುವ‌ಂತೆ ಮನವಿ - ಪಂಚಮಸಾಲಿ ಸಮಾಜದ 2ಎ ವರ್ಗದಡಿ ಮೀಸಲಾತಿ ಕಲ್ಪಿಸುವ‌ಂತೆ ಗೃಹ ಸಚಿವರಿಗೆ ಮನವಿ

ಪಂಚಮಸಾಲಿ ಸಮುದಾಯದ ಬಗ್ಗೆ ಅಪಾರ ಗೌರವ ಮತ್ತು ಅರಿವು ಹೊಂದಿರುವ ಬಸವರಾಜ ಬೊಮ್ಮಾಯಿಯವರು ಸಮುದಾಯದ ಶ್ರೇಯೋಭಿವೃದ್ಧಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ. ಸಮುದಾಯವನ್ನ 2ಎ ಮೀಸಲಾತಿ ವರ್ಗದಡಿ ಸೇರಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಮನವಿ ಸಲ್ಲಿಸುತ್ತೇನೆ ಎಂಬ ಭರವಸೆ ನೀಡಿದ್ದಾರೆ ಎಂದು ಶ್ರೀ ವಚನಾನಂದ ಸ್ವಾಮೀಜಿ ಮಾಹಿತಿ ನೀಡಿದರು.

Request for reservation Under 2A Category of the Panchamasali society
ಪಂಚಮಸಾಲಿ ಸಮಾಜದ 2ಎ ವರ್ಗದಡಿ ಮೀಸಲಾತಿ ಕಲ್ಪಿಸುವ‌ಂತೆ ಮನವಿ
author img

By

Published : Oct 20, 2020, 10:37 AM IST

ಹರಿಹರ: ವೀರಶೈವ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ರಾಜ್ಯದಲ್ಲಿ 2ಎ ವರ್ಗದಡಿ ಮೀಸಲಾತಿ ಕಲ್ಪಿಸುವ‌ ಹೋರಾಟದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸಮಾಜಕ್ಕೆ ಬೆಂಬಲವಾಗಿ ನಿಲ್ಲುವ ಆಶಯ ವ್ಯಕ್ತಪಡಿಸಿದ್ದಾರೆ ಎಂದು ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರುಗಳಾದ ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ.

ತಾಲೂಕಿನ ಹನಗವಾಡಿ ಗ್ರಾಮದ ಹೊರವಲಯದಲ್ಲಿರುವ ಪಂಚಮಸಾಲಿ ಶ್ರೀಪೀಠಕ್ಕೆ ಭೇಟಿ ನೀಡಿದ್ದ ಸಚಿವರಿಗೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯದಲ್ಲಿ 2ಎ ವರ್ಗದಡಿ ಮೀಸಲಾತಿ ಕಲ್ಪಿಸಿಕೊಡಬೇಕು ಮತ್ತು ಕೇಂದ್ರ ಸರ್ಕಾರವು ಸಮುದಾಯವನ್ನು ಒಬಿಸಿ ಕೆಟಗರಿಯಲ್ಲಿ ಸೇರಿಸಬೇಕು. ಈ ಪ್ರಸ್ತಾಪವನ್ನು ರಾಜ್ಯ ಸರ್ಕಾರವು ಸಚಿವ ಸಂಪುಟದ ಮುಂದಿಟ್ಟು ಕೇಂದ್ರ ಸರ್ಕಾರಕ್ಕೆ ಶಿಪಾರಸು ಮಾಡುವ ಕುರಿತು ಚರ್ಚಿಸಬೇಕು ಎಂದು ಶ್ರೀ ವಚನಾನಂದ ಮಹಾಸ್ವಾಮಿಗಳು ಮನವಿ ಸಲ್ಲಿಸಿದರು.

ಪಂಚಮಸಾಲಿ ಸಮುದಾಯದ ಬಗ್ಗೆ ಅಪಾರ ಗೌರವ ಮತ್ತು ಅರಿವು ಹೊಂದಿರುವ ಬೊಮ್ಮಾಯಿಯವರು ಸಮುದಾಯದ ಶ್ರೇಯೋಭಿವೃದ್ಧಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ. ಸಮುದಾಯವನ್ನ 2ಎ ಮೀಸಲಾತಿ ವರ್ಗದಡಿ ಸೇರಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಮನವಿ ಸಲ್ಲಿಸುತ್ತೇನೆ ಎಂಬ ಭರವಸೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ರಾಜ್ಯ ಪಂಚಮಸಾಲಿ ಸಂಘದಿಂದ ಶ್ರೀಪೀಠದ ಧರ್ಮದರ್ಶಿಗಳಾದ ಬಿ.ಸಿ.ಉಮಾಪತಿ, ಪಿ.ಡಿ.ಶಿರೂರ, ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನವೀನ್ ಪಾಟೀಲ ಪ್ರತ್ಯೇಕ ಪತ್ರದ ಮೂಲಕ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.