ದಾವಣಗೆರೆ : ಪರಿಶಿಷ್ಟ ಜಾತಿಯವರಿಗೆ ನ್ಯಾಯ ಒದಗಿಸಲು ಒಳಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ದಾವಣಗೆರೆಯಲ್ಲಿ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಎಸ್ಎಸ್ ಮುಖಂಡ ಹಾಲೇಶ್, ಇತ್ತೀಚೆಗೆ ವೀರಶೈವ, ಲಿಂಗಾಯಿತ, ಬೇಡ, ಹಾಗೂ ಜಂಗಮರಿಗೆ ಪರಿಶಿಷ್ಟ ಜಾತಿಯು ಪ್ರಮಾಣ ಪತ್ರ ನೀಡಲಾಗುತ್ತಿದೆ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇದನ್ನು ಈ ಕೂಡಲೇ ನಿಲ್ಲಿಸಬೇಕು, ಜೊತೆಗೆ ಪರಿಶಿಷ್ಠ ಜಾತಿಯವರಿಗೆ ಒಳಮೀಸಲಾತಿ ಜಾರಿ ಮಾಡಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ದಸಂಸ ಹರಿಹರ ತಾಲ್ಲೂಕು ಘಟಕದ ಸಂಚಾಲಕ ಪಿಜೆ ಮಹಾಂತೇಶ್ ಮಾತನಾಡಿ, ಸರ್ಕಾರ ಫಿಲ್ಮ್ ಸಿಟಿ ಯನ್ನು ದಾವಣಗೆರೆಯಲ್ಲಿ ನಿರ್ಮಿಸಬೇಕು, ಹರಿಹರದಲ್ಲಿ ದಸಂಸ ಸಂಸ್ಥಾಪಕರಾದ ಪ್ರೋ. ಬಿ ಕೃಷ್ಣಪ್ಪ ಅಧ್ಯಯನ ಪೀಠವನ್ನು ಆರಂಭಿಸಬೇಕು, ಸಿಎಎ ಮತ್ತು ಎನ್ ಆರ್ ಸಿಯನ್ನು ರದ್ದು ಮಾಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜನವರಿ 14ರಂದು ಹರಿಹರಕ್ಕೆ ಸಿಎಂ ಯಡಿಯೂರಪ್ಪನವರು ಆಗಮಿಸದಾಗ ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.