ದಾವಣಗೆರೆ: ಚನ್ನಗಿರಿ ತಾಲೂಕಿನ ಕೋಗಲೂರು ಗ್ರಾಮದಲ್ಲಿ ಹೃದಯಾಘಾತದಿಂದ ನಿವೃತ್ತ ಯೋಧ ಎಂ. ಧರಣೇಶ್ ಮೃತಪಟ್ಟಿದ್ದಾರೆ.
ಬೆಳಿಗ್ಗೆ 8 ಗಂಟೆಯ ಸುಮಾರಿಗೆ ತೀವ್ರ ಹೃದಯಾಘಾತವಾಗಿ ಕೊನೆಯು ಉಸಿರೆಳೆದರು.1997 ರ ಬ್ಯಾಚ್ನಲ್ಲಿ ಸೇನೆಗೆ ಸೇರಿದ್ದ ಧರಣೇಶ್, ಸಿಆರ್ಪಿಎಫ್ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ಪೊಲೀಸರು ಸೇರಿದಂತೆ ತಾಲೂಕು ಆಡಳಿತಾಧಿಕಾರಿಗಳು ಗೌರವ ಸಮರ್ಪಣೆ ಸಲ್ಲಿಸಿದರು. ಸಾರ್ವಜನಿಕರು ಸಹ ಅಂತಿಮ ದರ್ಶನ ಪಡೆದರು. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.