ETV Bharat / state

ಅನರ್ಹರು ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸದಿದ್ದರೆ ಕಠಿಣ ಕ್ರಮ: ದಾವಣಗೆರೆ ಡಿಸಿ ಎಚ್ಚರಿಕೆ

ಸರ್ಕಾರಿ ನೌಕರನಿಗೆ ತರವಲ್ಲದ ವರ್ತನೆ. ಬಿಪಿಎಲ್ ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವಾಗಿದ್ದು, ಇದನ್ನು ಸರ್ಕಾರಿ ನೌಕರನಾಗಿ ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ. ಒಬ್ಬ ಸರ್ಕಾರಿ ಅಧಿಕಾರಿ, ನೌಕರ ಸರ್ಕಾರದಿಂದ ವೇತನ ಭತ್ಯೆಗಳನ್ನು ಪಡೆಯುತ್ತಿರುವುದರಿಂದ ಯಾವ ರೀತಿಯಲ್ಲೂ ಬಡತನ ರೇಖೆಗಿಂತ ಕೆಳಗೆ ಬರುವುದಿಲ್ಲ.

DC mahantesh R. Beelagi
DC mahantesh R. Beelagi
author img

By

Published : Jul 5, 2020, 12:09 AM IST

ದಾವಣಗೆರೆ: ಜಿಲ್ಲೆಯಲ್ಲಿ ಆರ್ಥಿಕ ಸದೃಢ ಕುಟುಂಬಗಳು ಬಿಪಿಎಲ್‌ ಕಾರ್ಡ್ ಹೊಂದಿರುವುದು ಗಮನಕ್ಕೆ ಬಂದಿದೆ. ಸ್ವಯಂ ಪ್ರೇರಿತರಾಗಿ ವಾಪಾಸ್ ನೀಡದಿದ್ದರೆ ಕಾನೂನು ಕ್ರಮ‌ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರ ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ವಿತರಿಸುವ ಬಿಪಿಎಲ್ ಪಡಿತರ ಕಾರ್ಡ್​ ಅನ್ನು ಕೆಲ ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಅಧಿಕಾರಿ, ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಪಡೆದುಕೊಂಡಿದ್ದಾರೆ. ಸರ್ಕಾರದಿಂದ ವಿತರಿಸುವ ಪಡಿತರ ಮತ್ತು ಇನ್ನಿತರೆ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದರು.

ಇದು ಸರ್ಕಾರಿ ನೌಕರನಿಗೆ ತರವಲ್ಲದ ವರ್ತನೆ. ಬಿಪಿಎಲ್ ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವಾಗಿದ್ದು, ಇದನ್ನು ಸರ್ಕಾರಿ ನೌಕರನಾಗಿ ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ. ಒಬ್ಬ ಸರ್ಕಾರಿ ಅಧಿಕಾರಿ, ನೌಕರ ಸರ್ಕಾರದಿಂದ ವೇತನ ಭತ್ಯೆಗಳನ್ನು ಪಡೆಯುತ್ತಿರುವುದರಿಂದ ಯಾವ ರೀತಿಯಲ್ಲೂ ಬಡತನ ರೇಖೆಗಿಂತ ಕೆಳಗೆ ಬರುವುದಿಲ್ಲ. ಒಂದು ವೇಳೆ ಪಡೆದಿದ್ದರೆ ಬಿಪಿಎಲ್ ಪಡಿತರ ಚೀಟಿಯನ್ನು ಜು.10ರ ಒಳಗಾಗಿ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಕೊಡಲೇ ಹಿಂತಿರುಗಿಸಿ ರದ್ದುಪಡಿಸಿಕೊಳ್ಳಿ ಎಂದು ಸೂಚಿಸಿದರು.

ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಾಹಿತಿ, ದೂರು ಬಂದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಅವರಿಂದ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.