ETV Bharat / state

ಬೆಂಬಲ ಬೆಲೆಯೊಂದಿಗೆ ಭತ್ತ ಖರೀದಿ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ - ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ರೈತರ ನೋಂದಣಿ ಕಾರ್ಯ ನ. 30 ರಿಂದ ಡಿ. 30ರ ವರೆಗೆ ನಡೆಯಲಿದೆ. ಭತ್ತ ಮಾರಾಟ ಮಾಡುವ ರೈತರಿಗೆ 03 ದಿನಗಳ ಒಳಗಾಗಿ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

Davangere District Collector Meeting
ದಾವಣಗೆರೆ ಜಿಲ್ಲಾಧಿಕಾರಿ ಸಭೆ
author img

By

Published : Nov 7, 2020, 7:25 PM IST

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ನಿರ್ಧರಿಸಲಾಗಿದ್ದು, ರೈತರು ಮತ್ತು ಅಕ್ಕಿ ಗಿರಣಿಗಳ ನೋಂದಣಿ ಹಾಗೂ ಖರೀದಿ ಕೇಂದ್ರ ಪ್ರಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಬಲ ಬೆಲೆಯಲ್ಲಿ ಭತ್ತ ಹಾಗೂ ಶೇಂಗಾ ಖರೀದಿಸುವ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದಿರುವ ಭತ್ತವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಸರ್ಕಾರ ಆದೇಶ ನೀಡಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‍ಗೆ 1,868 ರೂ. ಹಾಗೂ ಗ್ರೇಡ್-ಎ ಭತ್ತಕ್ಕೆ 1,888 ರೂ. ಬೆಂಬಲ ಬೆಲೆ ಘೋಷಿಸಲಾಗಿದೆ.

ಸಾಮಾನ್ಯ ಭತ್ತ ಪ್ರತಿ ರೈತರಿಂದ ಗರಿಷ್ಟ 40 ಕ್ವಿಂ. (ಪ್ರತಿ ಎಕರೆಗೆ 16 ಕ್ವಿಂ.ನಂತೆ) ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸಲು ದಾವಣಗೆರೆ ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಸಂಗ್ರಹಣಾ ಏಜೆನ್ಸಿಯಾಗಿ ನೇಮಿಸಲಾಗಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಿದಂತಹ ರೈತರಿಂದ ಭತ್ತವನ್ನು, ನಿಗದಿತ ಅಕ್ಕಿ ಗಿರಣಿಗಳ ಮೂಲಕ ನೇರವಾಗಿ ಪಡೆದುಕೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದರು.

ಸದ್ಯ ಮಾರುಕಟ್ಟೆಯಲ್ಲಿ ಭತ್ತಕ್ಕೆ ಬೆಂಬಲ ಬೆಲೆಗಿಂತಲೂ ಕಡಿಮೆ ದರ ಇದೆ. ಹೀಗಾಗಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರ ಪ್ರಾರಂಭ ಮಾಡುತ್ತಿರುವುದು ರೈತರಿಗೆ ಅನುಕೂಲವಾಗಲಿದೆ. ಭತ್ತ ಮಾರಾಟ ಮಾಡಬಯಸುವ ರೈತರು ಕೃಷಿ ಇಲಾಖೆ ಜಾರಿಗೊಳಿಸಿರುವ ‘ಫ್ರೂಟ್ಸ್' ದತ್ತಾಂಶದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿರಬೇಕು. ಫ್ರೂಟ್ಸ್ ದತ್ತಾಂಶದಲ್ಲಿ ನೋಂದಣಿ ಆಗಿರದ ರೈತರಿಂದ ಭತ್ತ ಖರೀದಿಗೆ ಅವಕಾಶವಿಲ್ಲ. ಇದುವರೆಗೂ ನೋಂದಣಿ ಮಾಡಿಸದೇ ಇರುವ ರೈತರು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ತೆರಳಿ ನೋಂದಣಿ ಮಾಡಿಸಲು ಅವಕಾಶವಿದೆ ಎಂದರು.

ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಕಾರ್ಯನಿರತವಾಗಿರುವ ಅಕ್ಕಿ ಗಿರಣಿಗಳನ್ನು ಭತ್ತ ಖರೀದಿ ಕಾರ್ಯಕ್ಕೆ ನೋಂದಾಯಿಸಿಕೊಳ್ಳಬೇಕಿದ್ದು, ನ. 20 ರಿಂದ 25ರ ವರೆಗೆ ನೋಂದಣಿ ಮಾಡಿಕೊಳ್ಳಬೇಕು. ಭತ್ತ ಗುಣಮಟ್ಟ ಪರಿಶೀಲನೆಗೆ ಕೃಷಿ ಇಲಾಖೆ ಗ್ರೇಡರ್​ಗಳನ್ನು ನಿಯೋಜಿಸಿ, ಇವರಿಗೆ ಸೂಕ್ತ ತರಬೇತಿ ನೀಡಬೇಕು ಎಂದು ಹೇಳಿದ್ದಾರೆ.

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ರೈತರ ನೋಂದಣಿ ಕಾರ್ಯ ನ. 30 ರಿಂದ ಡಿ. 30ರ ವರೆಗೆ ನಡೆಯಲಿದೆ. ಭತ್ತ ಮಾರಾಟ ಮಾಡುವ ರೈತರಿಗೆ 03 ದಿನಗಳ ಒಳಗಾಗಿ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

16 ಹೋಬಳಿ ಕೇಂದ್ರಗಳಲ್ಲಿ ಖರೀದಿ ಕೇಂದ್ರ

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸುವ ಸಲುವಾಗಿ ಕಳೆದ ಬಾರಿ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಲಾಗಿತ್ತು. ಆದರೆ ಈ ಬಾರಿ ಜಗಳೂರು ತಾಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲೂಕುಗಳ ಒಟ್ಟು 16 ಹೋಬಳಿ ಕೇಂದ್ರಗಳಲ್ಲಿಯೂ ಭತ್ತ ಖರೀದಿ ಕೇಂದ್ರ ತೆರೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಸಿಬ್ಬಂದಿ ಕೊರತೆಯಾದಲ್ಲಿ ಜಿಲ್ಲಾಡಳಿತದ ವತಿಯಿಂದಲೇ ಸಿಬ್ಬಂದಿ ನಿಯೋಜಿಸಲಾಗುವುದು. ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸುವ ಕುರಿತು ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರ ಆಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.