ದಾವಣಗೆರೆ: ನಗರದ ಶಿವಮೊಗ್ಗ-ಹೊಸಪೇಟೆ ರಾಜ್ಯ ಹೆದ್ದಾರಿಯ ರೈಲ್ವೆ ಕೆಳ ಸೇತುವೆಯಲ್ಲಿ ಸ್ವರಾಜ್ ಮಜ್ದಾ ವಾಹನ ಬೈಕ್ಗೆ ಡಿಕ್ಕಿ ಹೊಡೆದು ಎಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ನಡೆದಿದೆ.
ಹರಿಹರ ನಗರದ ವಾಸಿ ಅಣ್ಣಪ್ಪ ಎಂಬುವರ ಪುತ್ರ ಧನಂಜಯ್ (20) ಮೃತ ವಿದ್ಯಾರ್ಥಿ. ಈತ ನಗರದ ಬಿಐಇಟಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಬೆಳಿಗ್ಗೆ ಟ್ಯೂಷನ್‍ಗೆ ಹೋಗಿದ್ದ ಸಹೋದರಿಯನ್ನು ಮನೆಗೆ ಕರೆದುಕೊಂಡು ಬರುವಾಗ ಗುತ್ತೂರು ಕಡೆಯಿಂದ ಬಂದ ಸ್ವರಾಜ್ ಮಜ್ದಾ ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‍ನಲ್ಲಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಸಹೋದರಿ ಐಶ‍್ವರ್ಯಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.