ದಾವಣಗೆರೆ: ರಾಜ್ಯದ ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಬಿಜೆಪಿಯವರು ಕಾಂಗ್ರೆಸ್ಗೆ ಸಪೋರ್ಟ್ ಮಾಡ್ತಿವಿ ಎಂದಿದ್ದಾರಂತೆ ಅಂತ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆಗೆ ವ್ಯಂಗ್ಯವಾಡಿದರು.
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಕೂಡ ಸಿಎಂ ಆಗೋದಕ್ಕೆ ರೆಡಿಯಾಗಿದ್ದಾರೆ, ನಾವು ಬೆಂಬಲ ಕೊಡ್ತೇವೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರಂತೆ ಎನ್ನುವ ವಿಚಾರಕ್ಕೆ ನಗರದಲ್ಲಿ ಪ್ರತಿಕ್ರಿಯಿಸಿದ ಎಸ್ ಎಸ್ ಮಲ್ಲಿಕಾರ್ಜುನ್, ನಮ್ಮ ಅಪ್ಪಾಜಿ ಸಿಎಂ ಆಗೋದಕ್ಕೆ ಬಿಜೆಪಿಯವರು ಕಾಂಗ್ರೆಸ್ಗೆ ಸಪೋರ್ಟ್ ಮಾಡ್ತಾರಂತೆ ಎಂದು ನಗೆ ಚಟಾಕಿ ಹಾರಿಸಿದರು.
ಸಿಎಂ ಆಗೋದಕ್ಕೆ ಎಲ್ಲರಿಗೂ ಆಸೆ ಇರುತ್ತದೆ. ಆದರೆ ನಮ್ಮ ಕಾಂಗ್ರೆಸ್ನಲ್ಲಿ ಒಂದು ಸಂಸ್ಕೃತಿ ಇದೆ. ಸೀನಿಯಾರಿಟಿ ನೋಡಿ ಹಾಗೂ ಶಾಸಕರು ಆರಿಸಿದ ವ್ಯಕ್ತಿ ಸಿಎಂ ಆಗುತ್ತಾರೆ ಎಂದು ಹೇಳಿದರು.
ಡಿಕೆಶಿ ಹೇಳಿದ್ದಾರೆ, ಚುನಾವಣೆಯಲ್ಲಿ ನಿಲ್ಲದೇ ಇರುವವರನ್ನು ಸಿಎಂ ಮಾಡಿದ್ದೇವೆ ಎಂದು. ಹಾಗೇ ಸಿಎಂ ಅಗುವವರು ಬಹಳ ಜನರು ಇರ್ತಾರೆ. ಶಾಸಕರು ಕೆಲವರ ಹೆಸರನ್ನು ಸಿಎಂ ಅಭ್ಯರ್ಥಿ ಎಂದು ಸೂಚಿಸುವುದು ಅವರವರ ವೈಯಕ್ತಿಕ ಅಭಿಪ್ರಾಯ ಅಷ್ಟೇ ಎಸ್ ಎಸ್ ಮಲ್ಲಿಕಾರ್ಜುನ್ ತಿಳಿಸಿದರು.
ಇದನ್ನೂ ಓದಿ: 'ಕೂಸು ಹುಟ್ಟುವ ಮುನ್ನವೇ ಕುಲಾಯಿ ಹೊಲಿಸಲು ಹೊರಟಂತಹ ಪರಿಸ್ಥಿತಿ ಕಾಂಗ್ರೆಸ್ಗೆ ಆಗಿದೆ'
ಇನ್ನು ಡಿಕೆಶಿ ಎಲ್ಲ ಕಾಂಗ್ರೆಸ್ ಶಾಸಕ ಮುಖಂಡರ ಜತೆ ಮೀಟಿಂಗ್ ಮಾಡಿದ್ದರು. ಪಕ್ಷ ಅಧಿಕಾರಕ್ಕೆ ಬರಲು ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಹೈಕಮಾಂಡ್ ಇದೆ, ಸಿನಿಯಾರಿಟಿ, ಎಲ್ಲ ಎಂಎಲ್ಎಗಳು ಸಿಎಂ ಅವರನ್ನು ಆರಿಸುತ್ತಾರೆ. ಈಗಲೇ ಸಿಎಂ ಅಭ್ಯರ್ಥಿ ಎಂದು ನಮ್ಮ ಕಾಂಗ್ರೆಸ್ನಲ್ಲಿ ಘೋಷಣೆ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.