ದಾವಣಗೆರೆ: ಜಿಲ್ಲಾ ಪಂಚಾಯತ್ ನೂತನ ಉಪಾಧ್ಯಕ್ಷರಾಗಿ ಚನ್ನಗಿರಿ ತಾಲೂಕಿನ ಕೋಗಲೂರು ಕ್ಷೇತ್ರದ ಸಾಕಮ್ಮ ಗಂಗಾಧರ ನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಪಂಚಾಯತ್‍ನ ಮುಖ್ಯ ಸಭಾಂಗಣದಲ್ಲಿ, ಜಿ.ಪಂ ಉಪಾಧ್ಯಕ್ಷರ ಸ್ಥಾನಕ್ಕೆ ಬೆಳಿಗ್ಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ಸಾಕಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಜಿ.ಪಂ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇನ್ನೂ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಜೊತೆಗೆ, ಜಿಲ್ಲೆಯಲ್ಲಿ ಉತ್ತಮ ಆಡಳಿತ ನೀಡಲು ಎಲ್ಲರೂ ಸಹಕರಿಸಬೇಕು ಎಂದು ಕೋರಿದರು. ಈ ವೇಳೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಜಿ.ಪಂ ಪ್ರಭಾರ ಅಧ್ಯಕ್ಷ ಲೋಕೇಶ್ವರ್, ಮಾಜಿ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯತ್ ಸಿಇಒ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಇದ್ದರು.