ETV Bharat / state

ಒಂಟೆ ಮೇಲೆ ಪ್ರಚಾರಕ್ಕೆ ಬಂದ ಶಾಮನೂರು ಶಿವಶಂಕರಪ್ಪ ಮೊಮ್ಮಗ: ಅಜ್ಜನ ಪರ ಮತಯಾಚಿಸಿದ ಸಮರ್ಥ್ - ಈಟಿವಿ ಭಾರತ ಕನ್ನಡ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಪರ ಮೊಮ್ಮಗ ಸಮರ್ಥ್ ಶಾಮನೂರು ಮತಯಾಚನೆ ಮಾಡಿದ್ದಾರೆ.

ಸಮರ್ಥ್ ಮತಯಾಚನೆ
ಸಮರ್ಥ್ ಮತಯಾಚನೆ
author img

By

Published : Apr 28, 2023, 9:24 AM IST

ಶಾಮನೂರು ಶಿವಶಂಕರಪ್ಪ ಪರ ಮತಯಾಚಿಸಿದ ಮೊಮ್ಮಗ ಸಮರ್ಥ್

ದಾವಣಗೆರೆ: ಚುನಾವಣಾ ಕಾವು ದಿನೇ ದಿನೇ ಏರುತ್ತಿದೆ. ಮತದಾನಕ್ಕೆ ಕೆಲವು ದಿನಗಳು ಬಾಕಿ ಇರುವಾಗಲೇ ಅಭ್ಯರ್ಥಿಗಳು ಹಾಗೂ ಅವರ ಕುಟುಂಬಸ್ಥರು ಕ್ಷೇತ್ರಗಳಲ್ಲಿ ಕಾಲಿಗೆ ಚಕ್ರಕಟ್ಟಿಕೊಂಡು ಪ್ರಚಾರ ಮಾಡ್ತಿದ್ದಾರೆ. ತಮಗೆ ಆಶೀರ್ವದಿಸುವಂತೆ ಮತದಾರರ ಪ್ರಭು ಬಳಿ ಮನವಿ ಮಾಡ್ತಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಪರ ಅವರ ಮೊಮ್ಮಗ ಒಂಟೆ ಮೇಲೆ ಕೂತು ಮತಯಾಚನೆ ಮಾಡಿ ಗಮನ ಸೆಳೆದಿದ್ದಾರೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಳಸಪ್ಪನಗಲ್ಲಿ, ವಿಠ್ಠಲ ಮಂದಿರ ಹತ್ತಿರ ಬಳಿ ಮಾಜಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ್‌ ಅವರ ಪುತ್ರ ಹಾಗೂ ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಒಂಟೆ ಮೇಲೆ ಕೂತು ವಿಭಿನ್ನವಾಗಿ ಕಾಂಗ್ರೆಸ್ ಕರಪತ್ರಗಳನ್ನು ಹಂಚುವ ಮೂಲಕ ಅಜ್ಜನಿಗೆ ಆಶೀರ್ವಾದ ಮಾಡುವಂತೆ ಮತದಾರರ ಬಳಿ ಮನವಿ ಮಾಡಿದರು. ಇನ್ನು ಪ್ರಚಾರಕ್ಕೆ ಮನೆಗೆ ಬಂದ ಶಾಮನೂರು ಅವರ ಮೊಮ್ಮಗ ಸಮರ್ಥ್​ರನ್ನು ಜನರು ಸ್ವಾಗತಿಸಿಕೊಂಡರು.

ಇತ್ತೀಚೆಗೆ ಮಾಜಿ ಸಿದ್ದರಾಮಯ್ಯ ಅವರ ಮೊಮ್ಮಗ ಧವನ್ ರಾಕೇಶ್ ಕೂಡ ವರುಣಾದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಜೊತೆಗೆ ಅಜ್ಜನ ಪರವಾಗಿ ಮೊದಲ ಬಾರಿಗೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ ಮತಯಾಚಿಸಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿಗೆ ಸೋಲಿನ ಹತಾಶೆ, ಪ್ರಧಾನಿ ಬಾಯಲ್ಲೂ ಕಾಂಗ್ರೆಸ್ ಗ್ಯಾರಂಟಿಯದ್ದೇ ಮಾತು: ಡಿಕೆಶಿ

ಕೋಗಲೂರಿನಲ್ಲಿ ಮಾಡಾಳ್ ಮಲ್ಲಿಕಾರ್ಜುನ್ ಪ್ರಚಾರ: ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಹಾಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್‌ ಸದ್ಯ ಭರ್ಜರಿ ಪ್ರಚಾರ ಮಾಡ್ತಿದ್ದಾರೆ. ಚನ್ನಗಿರಿ ತಾಲೂಕಿನ ಕೋಗಲೂರಿನಿಂದ ಭರ್ಜರಿ ಪ್ರಚಾರ ಮಾಡುವ ಮೂಲಕ ಆಶೀರ್ವಾದ ಮಾಡುವಂತೆ ಮನವಿ ಮಾಡಿದರು. ಮಾಯಕೊಂಡ ಬಿಜೆಪಿ ಅಭ್ಯರ್ಥಿ ಬಸವರಾಜ್ ನಾಯ್ಕ್ ಅವರು ಕಂದಗಲ್ಲು ಹಾಗೂ ಅಣಜಿ ಭಾಗದಲ್ಲಿ ಪ್ರಚಾರ ನಡೆಸಿದರು. 0

ಇದನ್ನೂ ಓದಿ: ಸೋದರನ ಕೈ ಬಲಪಡಿಸಲು ಕಾಂಗ್ರೆಸ್ ಸೇರಲಿದ್ದಾರೆ ಗೀತಾ ಶಿವರಾಜಕುಮಾರ್

ಹೊನ್ನಾಳಿ ನ್ಯಾಮತಿ ಕ್ಷೇತ್ರದಲ್ಲಿ ರೇಣುಕಾಚಾರ್ಯ ಪ್ರಚಾರ: ಇನ್ನು ಹೊನ್ನಾಳಿ ಕ್ಷೇತ್ರದ ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಎಂಪಿ ರೇಣುಕಾಚಾರ್ಯ ಅವರು ಹೊನ್ನಾಳಿ ತಾಲೂಕಿನ ಹೊಸಳ್ಳಿ, ಹುರುಳಿಹಳ್ಳಿ, ಹೊಸಳ್ಳಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರದ ಸಭೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಹಾಗೂ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳಲ್ಲಿ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳನ್ನು‌ ಜನರಿಗೆ ತಿಳಿ ಹೇಳಿದರು.

ಇದನ್ನೂ ಓದಿ: ನಾವು ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡುತ್ತೇವೆ : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಇದನ್ನೂ ಓದಿ: ಮಾವನ ಪರ ಮತಬೇಟೆಗೆ ಇಳಿದ ಸ್ಮಿತಾ ರಾಕೇಶ್: ವರುಣದಲ್ಲಿ ರಂಗೇರಿದ ಚುನಾವಣಾ ಕಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.