ದಾವಣಗೆರೆ: ಸಹಮತ ವೇದಿಕೆ ರಾಜ್ಯಾದ್ಯಂತ ಹಮ್ಮಿಕೊಂಡಿರುವ ‘ಮತ್ತೆ ಕಲ್ಯಾಣ’ ಕಾರ್ಯಕ್ರಮ ಶನಿವಾರ ನಗರದಲ್ಲಿ ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯಿತು.
ಹರಪನಹಳ್ಳಿಯಿಂದ ದಾವಣಗೆರೆಗೆ ಆಗಮಿಸಿದ ‘ಮತ್ತೆ ಕಲ್ಯಾಣ’ ಜಾಥಾವನ್ನು ಬಿ.ಕಲ್ಪನಹಳ್ಳಿಯಲ್ಲಿ ಬರಮಾಡಿಕೊಳ್ಳಲಾಯಿತು. ನಗರದ ಪಾರ್ವತಮ್ಮ ಶಾಮನೂರು ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮಕ್ಕೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.
2000 ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳ ಜೊತೆ ಶ್ರೀಗಳು ಸಂವಾದ ನಡೆಸಿದರು. ಧರ್ಮ ಗುರುಗಳು, ರಾಜಕೀಯ ವ್ಯಕ್ತಿಗಳು, ಸಮಾಜದ ಚಿಂತಕರು, ಎಲ್ಲಾ ಸಮುದಾಯದ
ಮುಖಂಡರು, ರೈತರು, ಸಾಂಸ್ಕೃತಿಕ ಕಲಾ ತಂಡದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸಮಾಜದಲ್ಲಿರುವ ಅಸಮಾನತೆ, ಬಸವಣ್ಣನವರು ಪ್ರತಿಪಾದಿಸಿದ ತತ್ವ, ಸಿದ್ಧಾಂತ, ಸಮಾಜಮುಖಿ ಕೆಲಸ ಸೇರಿದಂತೆ ಇತರೆ ವಿಚಾರಗಳ ಕುರಿತಂತೆ ಜನರಿಗೆ ತಿಳಿಸುವ ಉದ್ದೇಶದಿಂದ ‘ಮತ್ತೆ ಕಲ್ಯಾಣ’ ಕಾರ್ಯಕ್ರಮ ನಡೆಸಲಾಗುತ್ತಿದೆ.