ದಾವಣಗೆರೆ: ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 16 ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸಿಂಗ್ ಮಾಡಲಾಗುತ್ತಿದೆ.
ಜಿಲ್ಲಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಶುಚಿಗೊಳಿಸುವ ಕಾರ್ಯವೂ ನಡೆಯುತ್ತಿದೆ.
ಹೊನ್ನಾಳಿ ಪಟ್ಟಣದಲ್ಲಿಯೂ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಸಿದ್ದತೆ ನಡೆಯುತ್ತಿದೆ. ಪಟ್ಟಣದ ಶ್ರೀ ಚನ್ನೇಶ್ವರ ಗ್ರಾಮಾಂತರ ಪದವಿವಪೂರ್ವ ಕಾಲೇಜಿಗೆ ಭೇಟಿ ನೀಡಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಪರಿಶೀಲಿಸಿದರು.
ಸ್ಯಾನಿಟೈಸಿಂಗ್ಗೆ ಚಾಲನೆ ನೀಡಿದ ಅವರು, ಪಿಯುಸಿ ಪರೀಕ್ಷೆ ಬರೆಯಲಿರುವ ಚನ್ನೇಶ್ವರ ಗ್ರಾಮಾಂತರ ಪದವಿ ಪೂರ್ವ ಕಾಲೇಜಿನ 600 ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ಪದವಿವಪೂರ್ವ ಕಾಲೇಜುಗಳ 650 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಮಾಸ್ಕ್ಗಳನ್ನು ನೀಡಿದರು.