ದಾವಣಗೆರೆ: ತಾವು ಬೆಳೆದ ಬೆಳೆಗಳನ್ನು ರೈತರು ಸ್ವಯಂಪ್ರೇರಿತರಾಗಿ ನಾಶಪಡಿಸಿದರೆ ಪರಿಹಾರ ಇಲ್ಲ. ಹಾಗಾಗಿ ದಯವಿಟ್ಟು ರೈತರು ಬೆಳೆ ನಾಶ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊರೊನಾ ತಡೆ ಸಂಬಂಧ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಆತುರಕ್ಕೊಳಗಾಗಿ ಬೆಳೆಗಳನ್ನು ನಾಶ ಮಾಡಬಾರದು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್ಡೌನ್ ಮಾಡಲಾಗಿದ್ದು, ಇದು ಅನಿರೀಕ್ಷಿತ. ಯಾರೂ ಸಹ ಇದನ್ನು ನಿರೀಕ್ಷಿಸಿರಲಿಲ್ಲ. ಲಾಕ್ಡೌನ್ ಮುಗಿದ ಮೇಲೆ ರೈತರ ಫಸಲುಗಳಿಗೆ ಒಳ್ಳೆಯ ಬೆಲೆ ಬಂದೇ ಬರುತ್ತದೆ. ಸ್ವಲ್ಪ ತಾಳ್ಮೆಯಿಂದ ಕಾಯಿರಿ ಎಂದು ಮನವಿ ಮಾಡಿದರು.
ಕೇವಲ ಪ್ರಕೃತಿ ವಿಕೋಪಕ್ಕೆ ಬೆಳೆ ನಾಶವಾದರೆ ಮಾತ್ರ ಪರಿಹಾರ ನೀಡುತ್ತೇವೆ. ರೈತರು ಬೆಳೆಗಳನ್ನು ನಾಶ ಮಾಡಿಕೊಂಡರೆ ಅದಕ್ಕೆ ಪರಿಹಾರ ನೀಡುವುದಿಲ್ಲ. ಹೂವಿನ ಬೆಳೆ ನಷ್ಟಕ್ಕೆ ಪರಿಹಾರ ಒದಗಿಸುವ ಬಗ್ಗೆ ಸಿಎಂ ಗಮನಕ್ಕೆ ತರಲಾಗುವುದು. ಜಿಲ್ಲೆಯಲ್ಲಿ ಹೂವಿನ ಬೆಳೆಯು ಸುಮಾರು 2.58 ಕೋಟಿಯಷ್ಟು ನಷ್ಟವಾಗಿದೆ ಎಂದು ತಿಳಿದು ಬಂದಿದೆ. ಪ್ರಾಕೃತಿಕ ನಷ್ಟದ ಬಗ್ಗೆ ಸಿಎಂ ಎಲ್ಲಾ ಜಿಲ್ಲೆಗಳಿಂದ ವರದಿ ತರಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕೃಷಿ ಚಟುವಟಿಕೆ ಯಾವುದೇ ಕಾರಣಕ್ಕೂ ನಿಲ್ಲಬಾರದು ಎಂದು ಸರ್ಕಾರ ಎಲ್ಲಾ ಇಲಾಖೆಗಳಿಗೆ ನಿರ್ದೇಶನ ನೀಡಿದೆ. ಈ ಬಗ್ಗೆ ತಾವು ಖುದ್ದಾಗಿ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ. ಕೃಷಿ ಚಟುವಟಿಕೆಗಳಿಗೆ ಎಲ್ಲಾ ರೀತಿಯ ಬೆಂಬಲ ನೀಡುತ್ತೇವೆ. ಜಿಲ್ಲೆಯ ಕೆಲವು ಕಡೆಗಳಲ್ಲಿ ಕಳಪೆ ಬೀಜಗಳನ್ನು ಮಾರಾಟ ಮಾಡುತ್ತಾರೆ ಎನ್ನುವುದು ತಮ್ಮ ಗಮನಕ್ಕೆ ಬಂದಿದೆ. ಕಳಪೆ ಬೀಜ ಮಾರಾಟ ಮಾಡುವವರು ಎಷ್ಟೇ ದೊಡ್ಡವರಾಗಿದ್ದರೂ ಅವರ ವಿರುದ್ಧ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸ್ವಯಂ ಪ್ರೇರಿತರಾಗಿ ಬೆಳೆ ನಾಶ ಮಾಡಿದರೆ ಪರಿಹಾರ ಇಲ್ಲ: ಸಚಿವ ಬಿ.ಸಿ.ಪಾಟೀಲ್
ಪ್ರಕೃತಿ ವಿಕೋಪಕ್ಕೆ ಬೆಳೆ ನಾಶವಾದರೆ ಮಾತ್ರ ಪರಿಹಾರ ನೀಡುತ್ತೇವೆ. ಬದಲಾಗಿ ರೈತರು ಸ್ವಯಂಪ್ರೇರಿತರಾಗಿ ಬೆಳೆಗಳನ್ನು ನಾಶ ಮಾಡಿಕೊಂಡರೆ ಅದಕ್ಕೆ ಪರಿಹಾರ ನೀಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.