ETV Bharat / state

ವೀರಶೈವ‌ಲಿಂಗಾಯತರನ್ನ ಒಬಿಸಿ ಪಟ್ಟಿ ಸೇರ್ಪಡೆಗೆ ಶಿಫಾರಸು ಮಾಡಬೇಕು: ಶಾಮನೂರು ಶಿವಶಂಕರಪ್ಪ - ವೀರಶೈವ‌ಲಿಂಗಾಯತ

ರಾಜ್ಯ ಸರ್ಕಾರ ವೀರಶೈವ ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿ ಸೇರ್ಪಡೆಗೆ ಶಿಫಾರಸು ಮಾಡಬೇಕು ಎಂದು ಅಖಿಲ ಭಾರತೀಯ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಒತ್ತಾಯಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ
author img

By ETV Bharat Karnataka Team

Published : Jan 15, 2024, 7:21 PM IST

ಶಾಮನೂರು ಶಿವಶಂಕರಪ್ಪ

ದಾವಣಗೆರೆ : ರಾಜಕೀಯ ಬಿಟ್ಟು ಸರ್ಕಾರ ನಮಗೆ ಸಿಗುವ ಹಕ್ಕನ್ನು ಮಾನ್ಯ ಮಾಡ್ಬೇಕು. ರಾಜ್ಯ ಸರ್ಕಾರ ಸಕಲ ವೀರಶೈವ‌ ಲಿಂಗಾಯತರನ್ನ ಕೇಂದ್ರದ ಒಬಿಸಿ ಪಟ್ಟಿ ಸೇರ್ಪಡೆಗೆ ಶಿಫಾರಸು ಮಾಡಬೇಕು. ಕೇಂದ್ರ ಸರ್ಕಾರ ಅದನ್ನು ಸ್ವೀಕರಿಸಬೇಕು ಎಂದು ಅಖಿಲ ಭಾರತೀಯ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಕೇಂದ್ರ, ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದರು.

ದಾವಣಗೆರೆ ಜಿಲ್ಲೆಯ ಹರಿಹರದ ಪಂಚಮಸಾಲಿ ಮಠದಲ್ಲಿ ನಡೆದ ಹರಜಾತ್ರೆಯಲ್ಲಿ ಮಾತನಾಡಿದ ಅವರು, ಕೇಂದ್ರ ರಾಜ್ಯ ಸರ್ಕಾರಗಳು ನಮ್ಮ ಸಮಯಕ್ಕೆ ಸಹಕಾರಿಯಾಗಬೇಕು. ಬಡವರಿಗೆ ಆಸರೆ ಆಗಬೇಕು. ವೀರಶೈವ-ಲಿಂಗಾಯತ ಬೇರೆ ಬೇರೆ ಅಲ್ಲ, ನಾವು ಎಲ್ಲರೂ ಒಂದೇ. ವೀರಶೈವ ಲಿಂಗಾಯತ ಸಮಾಜದ ಒಳ‌ಪಂಗಡಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬಾರದು. ಎಲ್ಲ ವೀರಶೈವ ಲಿಂಗಾಯತರು ಒಂದೇ ಎಂಬುದನ್ನ ತಿಳಿಯಬೇಕು. ಇಂತಹ ಸಮಾಜದ ಬಡ ಮಕ್ಕಳಿಗೆ ಶಿಕ್ಷಣ ಉದ್ಯೋಗಕ್ಕೆ ಅನುಕೂಲ ಆಗುವ ದೃಷ್ಠಿಯಿಂದ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಂಡು, ‌ಕೇಂದ್ರ ಸರ್ಕಾರ ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಬೇಕು ಎಂದು ಶಿಪಾರಸು ಮಾಡುವಂತೆ ಆಗ್ರಹಿಸಿದರು.

ಇತ್ತೀಚಿಗೆ ಪಂಚಮಸಾಲಿ ಸಮಾಜ ಹೆಚ್ಚು ಬೆಳವಣಿಗೆ ಹೊಂದುತ್ತಿದೆ. ಇದು ಸಂತಸದ ವಿಚಾರ. ಇನ್ನು ಸಿಎಂ ಸಿದ್ದರಾಮಯ್ಯ ಅವರು ಹೇಳಿದಂತೆ ಆರು ಗ್ಯಾರಂಟಿಗಳನ್ನು ಕೊಟ್ಟಿದ್ದಾರೆ. ಮಹಿಳೆಯರಿಗೆ, ವಿದ್ಯಾರ್ಥಿಗಳ ಖಾತೆಗೆ ಹಣ ಬರುತ್ತಿದೆ. ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಎಲ್ಲ ಗ್ಯಾರಂಟಿಗಳು ಮಹಿಳೆಯರಿಗೆ ಅನುಕೂಲ ಆಗ್ತಿದೆ ಎಂದು ತಮ್ಮ ಸರ್ಕಾರದ ಕಾರ್ಯವೈಖರಿ ಬಗ್ಗೆ ಸಂತಸ ಹಂಚಿಕೊಂಡರು.

ಅವೈಜ್ಞಾನಿಕ ಜಾತಿಗಣತಿಗೆ ನಮ್ಮ ವಿರೋಧ ಇದೆ (ಪ್ರತ್ಯೇಕ ಸುದ್ದಿ) : ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ಅವೈಜ್ಞಾನಿಕವಾಗಿದ್ದು, ವೈಜ್ಞಾನಿಕವಾಗಿ ಸಮಿಕ್ಷೆಯಾಗಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ (ನವೆಂಬರ್ -25-23) ಒತ್ತಾಯಿಸಿದ್ದರು. ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಅವರು ಜಾತಿ ಜನಗಣತಿ ವರದಿ ಸರಿ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಶಾಮನೂರು ಶಿವಶಂಕರಪ್ಪ, ''ಜಾತಿ ಗಣತಿ ಲೋಪದಿಂದ ಕೂಡಿದೆ ಎಂದು ನಾವು ವಿರೋಧ ಮಾಡುತ್ತಿದ್ದೇವೆ. ವರದಿಯಲ್ಲಿ ಏನಿದೆ ಅಂತ ಅದೆಲ್ಲ ಲೀಕ್ ಆಗಿದೆ. ಇದರಲ್ಲಿ ಲಿಂಗಾಯತ ವೀರಶೈವ ಎಂದು ಬರೆದುಕೊಂಡೇ ಇಲ್ಲ. ಅನೇಕ ಲೋಪದೋಷಗಳಿರುವ ಈ ಸಮಿಕ್ಷಾ ವರದಿಗೆ ಎಲ್ಲರ ವಿರೋಧವಿದೆ. ನಾವೂ ಸಹ ಸಿಎಂ ಭೇಟಿ ಮಾಡುತ್ತೇವೆ. ಒಕ್ಕಲಿಗರ ಸಮುದಾಯದ ರೀತಿಯೇ ಸಹಿ ಮಾಡಿ ವಿರೋಧ ವ್ಯಕ್ತಪಡಿಸುತ್ತೇವೆ. ಬಿಜೆಪಿ, ಜೆಡಿಎಸ್​​​ನವರೂ ಸಹ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವರದಿ ಕುರಿತು ಈಗಾಗಲೇ ಮೌಖಿಕವಾಗಿ ಸಿಎಂ ಬಳಿ ಚರ್ಚೆ ನಡೆಸಿದ್ದೇವೆ, ನೋಡೋಣ ಎಂದು ಹೇಳಿದ್ದಾರೆ'' ಎಂದಿದ್ದರು.

ಇದನ್ನೂ ಓದಿ: ಅವೈಜ್ಞಾನಿಕ ಜಾತಿಗಣತಿಗೆ ನಮ್ಮ ವಿರೋಧ ಇದೆ: ಶಾಮನೂರು ಶಿವಶಂಕರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.