ದಾವಣಗೆರೆ: ಕೊರೊನಾ ಸೋಂಕು ಹಾಗೂ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಹಕ್ಕಿಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಡಳಿತ ಬಿಗಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಅಲ್ಲದೇ ಕೆಲಸಕ್ಕೆ ತಡವಾಗಿ ಬಂದ ಇಬ್ಬರು ಸಬ್ ರಿಜಿಸ್ಟ್ರಾರ್ಗಗಳಿಗೆ ಡಿಸಿ ಮಹಾಂತೇಶ್ ಆರ್. ಬೀಳಗಿ ಶೋಕಾಸ್ ನೋಟಿಸ್ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಕಟ್ಟುನಿಟ್ಟಿನ ಕ್ರಮದಲ್ಲಿ ಯಾವುದೇ ಮುಲಾಜಿಲ್ಲ. ಮಾ. 24ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಆದೇಶವನ್ನು ಪ್ರತಿಯೊಬ್ಬರೂ ಪಾಲಿಸಲೇಬೇಕು. ಬಟ್ಟೆ ಅಂಗಡಿಗಳು, ಹೋಟೆಲ್ಗಳು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲೇಬೇಕು. ಇದಕ್ಕಾಗಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು. ಇನ್ನು ಕೆಲಸಕ್ಕೆ ತಡವಾಗಿ ಬಂದ ಇಬ್ಬರು ಸಬ್ ರಿಜಿಸ್ಟ್ರಾರ್ಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದುವರೆಗೆ ಇಪ್ಪತ್ತಕ್ಕೂ ಹೆಚ್ಚು ಪ್ರಕರಣಗಳ ಬಗ್ಗೆ ವರದಿ ಬಂದಿದ್ದು, ಇದುವರೆಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿಸಿದರು.