ದಾವಣಗೆರೆ: ಬೆಳ್ಳೋಡಿ ಕನಕ ಗುರುಪೀಠಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ನಿರಂಜನಾನಂದ ಪುರಿ ಶ್ರೀಯವರಿಂದ ಆಶೀರ್ವಾದ ಪಡೆದರು. 75ನೇ ಹುಟ್ಟುಹಬ್ಬದ ಪ್ರಯುಕ್ತ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮ ಮುಗಿಸಿಕೊಂಡು, ನೇರವಾಗಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೋಡಿ ಕನಕ ಗುರುಪೀಠಕ್ಕೆ ಅವರು ಆಗಮಿಸಿದರು.
ಮಠಕ್ಕೆ ಆಗಮಿಸಿದ ಸಿದ್ದರಾಮಯ್ಯಗೆ ನಿರಂಜನಾನಂದ ಪುರಿ ಶ್ರೀ ಕೇಕ್ ಕಟ್ ಮಾಡಿಸಿ, ಸನ್ಮಾನಿಸುವ ಮೂಲಕ ಶುಭಾಶಯ ತಿಳಿಸಿದರು. ಸಿದ್ದರಾಮಯ್ಯ ಹಾಗೂ ಶ್ರೀಯವರು ಬಳಿಕ ಪರಸ್ಪರ ಒಬ್ಬರಿಗೊಬ್ಬರು ಕೇಕ್ ತಿನ್ನಿಸಿದ್ರು. ಬಹಳ ವರ್ಷಗಳ ನಂತರ ಸಿದ್ದರಾಮಯ್ಯ ಮಠಕ್ಕೆ ಆಗಮಿಸಿ ಸ್ವಾಮೀಜಿ ಭೇಟಿ ಮಾಡಿರುವುದು ಅಚ್ಚರಿಗೆ ಕಾರಣವಾಯಿತು.
ಸಿದ್ದರಾಮಯ್ಯ ಜತೆ ಮಾಜಿ ಸಚಿವ ಜಮೀರ್, ಹೆಚ್.ಎಂ.ರೇವಣ್ಣ, ಶಾಸಕ ಯತೀಂದ್ರ ಸಿದ್ದರಾಮಯ್ಯ ಇದ್ದರು. ಸಿದ್ದರಾಮಯ್ಯ ಹುಟ್ಟುಹಬ್ಬದ ಪ್ರಯುಕ್ತ ಮಠದ ರೇವಣಸಿದ್ದೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದರು. ಬಳಿಕ ಅವರು ಸ್ವಾಮೀಜಿ ಜೊತೆ ಮಾತುಕತೆ ನಡೆಸಿದರು.
ಇದನ್ನೂ ಓದಿ: ನನ್ನ ಮತ್ತು ಡಿಕೆಶಿ ನಡುವೆ ಬಿರುಕಿದೆ ಎಂಬ ತಪ್ಪು ಮಾಹಿತಿಯನ್ನು ಜನರಿಗೆ ನೀಡಲಾಗುತ್ತಿದೆ: ಸಿದ್ದರಾಮಯ್ಯ