ದಾವಣಗೆರೆ: ಹಾವು ಕಚ್ಚಿ ರೈತ ಸಾವನ್ನಪ್ಪಿರುವ ಘಟನೆ ಹರಪನಹಳ್ಳಿ ತಾಲೂಕಿನ ಹಗರಿಗುಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಿದ್ದಲಿಂಗಪ್ಪ ಸಾವನ್ನಪ್ಪಿದ ರೈತ. ಬೆಳಗಿನ ಜಾವ ಜಮೀನಿಗೆ ನೀರು ಹಾಯಿಸಲು ಹೋದಾಗ ಹಾವು ಕಚ್ಚಿ ಮೃತಪಟ್ಟಿದ್ದಾನೆ. ಸಿದ್ದಲಿಂಗಪ್ಪ ಮೃತದೇಹವನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಹರಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.