ದಾವಣಗೆರೆ : ಕೊರೊನಾ ಸೋಂಕಿತರಿರುವ ಕಂಟೇನ್ಮೆಂಟ್ ಝೋನ್ಗಳಲ್ಲಿ ಯಾರೂ ಸಹ ಹೊರ ಬರಬಾರದು. ಒಂದು ವೇಳೆ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಸ್ಪಿ ಹನುಮಂತರಾಯ ಎಚ್ಚರಿಕೆ ನೀಡಿದ್ದಾರೆ.
ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಮಾತನಾಡಿದ ಅವರು, ಡಿಸಿ ಜೊತೆ ಕಂಟೇನ್ಮೆಂಟ್ ಝೋನ್ಗೆ ತೆರಳಿದ್ದ ವೇಳೆ ಜನರು ಮನೆಯಿಂದ ಹೊರಬರುತ್ತಿರುವ ವಿಚಾರ ಗೊತ್ತಾಗಿದೆ. ಸರ್ಕಾರದ ಸೂಚನೆಯನ್ನು ಎಲ್ಲರೂ ಪಾಲಿಸಬೇಕು ಎಂದರು.
ಈಗಾಗಲೇ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಹಾಗೆಂದ ಮಾತ್ರಕ್ಕೆ ಹೇಗೆ ಬೇಕೋ ಹಾಗೆ ಓಡಾಡುವಂತಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೆಲಸ ಮಾಡುವ ಸ್ಥಳ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು. ಕೊರೊನಾ ಸೋಂಕು ಹರಡದಂತೆ ತಡೆಯಲು ಜನರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.