ದಾವಣಗೆರೆ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯ ಚೇತರಿಕೆಗಾಗಿ ನಗರದಲ್ಲಿ ಜೆಡಿಎಸ್ ಮುಖಂಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಜೆಡಿಎಸ್‌ನ ಮಾಜಿ ಶಾಸಕ ಹೆಚ್ ಎಸ್ ಶಿವಶಂಕರ್ ನಿವಾಸದಲ್ಲಿ ರುದ್ರಾಭಿಷೇಕ ನೆರವೇರಿಸುವ ಮೂಲಕ ಕುಮಾರಸ್ವಾಮಿ ಆರೋಗ್ಯ ಸುಧಾರಣೆಗೆ ಪ್ರಾರ್ಥನೆ ಸಲ್ಲಿಸಲಾಯಿತು.
ಜೊತೆಗೆ ಹೆಚ್‌ಡಿಕೆ ಅವರ 60ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಈ ಪೂಜೆ ಹಮ್ಮಿಕೊಳ್ಳಲಾಗಿದೆ. ರುದ್ರಾಭಿಷೇಕ ಮಾಡುವ ಮೂಲಕ ಹುಟ್ಟುಹಬ್ಬಕ್ಕೆ ಶುಭಾಶಯವನ್ನು ನೂರಾರು ಕಾರ್ಯಕರ್ತರು ಕೋರಿದರು. ಕುಮಾರಸ್ವಾಮಿ ಅವರಿಗೆ ಆರೋಗ್ಯ ಭಾಗ್ಯ ಕರುಣಿಸಲಿ ಎಂದು ಈ ವೇಳೆ ಪ್ರಾರ್ಥಿಸಲಾಯಿತು.