ದಾವಣಗೆರೆ: ಎಸ್ಎಸ್ಎಲ್ಸಿ ಪರೀಕ್ಷೆಗಾಗಿ ಸುರಕ್ಷಾ ವಿಧಾನಗಳೊಂದಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತಿದೆ. ಜಿಲ್ಲೆಯಲ್ಲಿ ಒಟ್ಟು 93 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಮಾಡಲಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಹೇಳಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 79 ಮುಖ್ಯ ಪರೀಕ್ಷಾ ಕೇಂದ್ರಗಳು ಹಾಗೂ ಹೆಚ್ಚುವರಿಯಾಗಿ 14 ಪರೀಕ್ಷಾ ಕೇಂದ್ರಗಳನ್ನು ಮಾಡಿಕೊಳ್ಳಲಾಗಿದೆ. ಕಂಟೈನ್ಮೆಂಟ್ ವಲಯಗಳ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳಲಾಗುವುದು ಎಂದರು.
ಕೆಮ್ಮು, ಶೀತ, ಜ್ವರದಂತಹ ಪ್ರಕರಣಗಳಿದ್ದಲ್ಲಿ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು. ಒಂದು ಪರೀಕ್ಷಾ ಕೇಂದ್ರಕ್ಕೆ ಐವರು ದೈಹಿಕ ಶಿಕ್ಷಕರನ್ನು ನೇಮಿಸಲಾಗುವುದು. ಈವರೆಗೆ ಕಂಟೈನ್ಮೆಂಟ್ ಝೋನ್ನ 96 ವಿದ್ಯಾರ್ಥಿಗಳಿದ್ದಾರೆ ಎಂದು ತಿಳಿಸಿದರು.
ಹರಿಹರದ ಮೂವರು ವಿದ್ಯಾರ್ಥಿಗಳು ಕ್ವಾರಂಟೈನ್ನಲ್ಲಿದ್ದು, ಅವರಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಮುಂಬರುವ ಪರೀಕ್ಷೆಯಲ್ಲಿ ಮೊದಲ ಬಾರಿಗೆ ಪರೀಕ್ಷೆ ಎದುರಿಸಿದ ವಿದ್ಯಾರ್ಥಿಗಳೆಂದು ಪರೀಕ್ಷಿಸಲಾಗುವುದು. ಜೂನ್ 25 ರಿಂದ ಜುಲೈ 3ರವೆರೆಗೆ ಪರೀಕ್ಷೆ ನಡೆಯಲಿದ್ದು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.