ETV Bharat / state

ಹೊನ್ನಾಳಿಯಲ್ಲಿ ಮಾರ್ಚ್ 5ರಿಂದ 7ರವರೆಗೆ ರಾಜ್ಯಮಟ್ಟದ ಕೃಷಿ ಮೇಳ! - state level agriculture fair latest news

ನಟ ಶಿವರಾಜ್ ಕುಮಾರ್ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರಿಂದ ರಸಮಂಜರಿ ಕಾರ್ಯಕ್ರಮವೂ ಇರಲಿದೆ. ಹಿರೇಕಲ್ಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಸದ ರಾಘವೇಂದ್ರ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ, ರೈತ ಮುಖಂಡರು ಪಾಲ್ಗೊಂಡು ಚರ್ಚಿಸಿದರು.

State Level Agriculture Fair from March 5th to 7th in Honnally!
ಹೊನ್ನಾಳಿಯಲ್ಲಿ ಮಾರ್ಚ್ 5ರಿಂದ 7ರವರೆಗೆ ರಾಜ್ಯಮಟ್ಟದ ಕೃಷಿ ಮೇಳ!
author img

By

Published : Feb 22, 2020, 5:01 PM IST

ದಾವಣಗೆರೆ: ಹೊನ್ನಾಳಿ ಪಟ್ಟಣದ ಹಿರೇಕಲ್ಮಠದಲ್ಲಿ ಮಾರ್ಚ್ 5 ರಿಂದ 7ರವರೆಗೆ ರಾಜ್ಯ ಮಟ್ಟದ ಕೃಷಿ ಮೇಳ, ಸಮಾವೇಶ ನಡೆಯಲಿದೆ. ಹಿರೇಕಲ್ಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ನಟ ಶಿವರಾಜ್ ಕುಮಾರ್ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರಿಂದ ರಸಮಂಜರಿ ಕಾರ್ಯಕ್ರಮವೂ ಇರಲಿದೆ. ಹಿರೇಕಲ್ಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಸದ ರಾಘವೇಂದ್ರ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ, ರೈತ ಮುಖಂಡರು ಪಾಲ್ಗೊಂಡು ಚರ್ಚಿಸಿದರು. ಇದೇ ವೇಳೆ ಭೂಮಿ‌ ಪೂಜೆ ಕಾರ್ಯಕ್ರಮವನ್ನು ನಡೆಸಲಾಯಿತು.

ಹೊನ್ನಾಳಿಯಲ್ಲಿ ಮಾರ್ಚ್ 5ರಿಂದ 7ರವರೆಗೆ ರಾಜ್ಯಮಟ್ಟದ ಕೃಷಿ ಮೇಳ!

ಕಾರ್ಯಕ್ರಮದಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಡಿ ಕೆ ಶಿವಕುಮಾರ್ ಸೇರಿ ಹಲವು ರಾಜಕಾರಣಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.‌ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭಾಗವಹಿಸುವ ಸಾಧ್ಯತೆ ಇದೆ. ಮೈಸೂರು ಮಹಾರಾಜರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು ಎಂದು ರೇಣುಕಾಚಾರ್ಯರು ತಿಳಿಸಿದ್ದಾರೆ. ಸಂಸದ ರಾಘವೇಂದ್ರ ಸಹ ಕಾರ್ಯಕ್ರಮದ ಮೇಲುಸ್ತುವಾರಿ ವಹಿಸಿದ್ದು,‌ ಸಮಾವೇಶ ಯಶಸ್ಸಿಗೆ ಶ್ರಮಿಸಲಾಗುವುದು ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.