ದಾವಣಗೆರೆ: ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಶಂಕಿತರನ್ನು ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಕೋವಿಡ್ ವಾರ್ ರೂಮ್ ನಿಂದ ಕ್ವಾರಂಟೈನ್ ಉಲ್ಲಂಘನೆ ಮಾಡಿದವರ ಬಗ್ಗೆ ಮಾಹಿತಿ ಹಾಗೂ ವಿವರಗಳು ಸಿಕ್ಕಿದ್ದು, ಕ್ವಾರಂಟೈನ್ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಜಿಲ್ಲಾ ವಾರ್ ರೂಮ್ ನಿಂದ ಅವರು ನೀಡಿರುವ ನಂಬರ್ ಗಳಿಗೆ ಫೋನ್ ಮಾಡುವ ಮೂಲಕ ಪರಿಶೀಲಿಸಿದಾಗ ಹೋಮ್ ಕ್ವಾರಂಟೈನ್‍ಗೆ ಒಳಗಾದ ಕೆಲವು ವ್ಯಕ್ತಿಗಳು ನಿಯಮ ಮೀರಿ ಮನೆಯಿಂದ ಹೊರಗೆ ಓಡಾಡುತ್ತಿರುವುದು ಕಂಡುಬಂದಿದೆ. ಈ ರೀತಿ ಕ್ವಾರಂಟೈನ್ ಉಲ್ಲಂಘನೆ ಮಾಡಿ ಹೊರಗೆ ಓಡಾಡುವುದು ಅಥವಾ ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೆ ಹೋಗುವುದು ಅಪರಾಧ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹೋಮ್ ಕ್ವಾರಂಟೈನ್‍ನಲ್ಲಿದ್ದು, ನಿಯಮ ಉಲ್ಲಂಘನೆ ಮಾಡಿದವರಿಗೆ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಸಾಂಸ್ಥಿಕ ಕ್ವಾರಂಟೈನ್‍ಗೆ ಇಡಲಾಗುವುದು. ಈ ಬಗ್ಗೆ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ದಾಖಲಿಸುವಂತೆ ಕೋರಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ತಿಳಿಸಿದ್ದಾರೆ.