ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಇಡೀ ಜಿಲ್ಲಾಸ್ಪತ್ರೆಯನ್ನು ಜಿಲ್ಲಾಡಳಿತ ಕೊರೊನಾ ರೋಗಿಗಳಿಗೆ ಮೀಸಲಿಟ್ಟಿದೆ. ಆದರೆ ನಾನ್ ಕೋವಿಡ್ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬೆಡ್ ನೀಡದೆ ಖಾಸಗಿ ಆಸ್ಪತ್ರೆಗೆ ರೆಫರ್ ಮಾಡಲಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳು ಮಾತ್ರ ಸರ್ಕಾರದ ಆದೇಶ ಇದ್ರು ಕೂಡ ಬೆಡ್ ನೀಡಲು ಹಿಂದೇಟು ಹಾಕುತ್ತಿವೆ.
ಜಿಲ್ಲಾಡಳಿತ ಈಗಾಗಲೇ ನಾನ್ ಕೋವಿಡ್ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಿಂದ ರೆಫರ್ ಮಾಡಿದ್ರೆ ಅತಂಹ ರೋಗಿಗೆ ಖಾಸಗಿ ಆಸ್ಪತ್ರೆಗಳು ಬೆಡ್ ನೀಡಬೇಕೆಂದು ಆದೇಶ ಹೊರಡಿಸಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಆಡಿಯಲ್ಲಿ ಖಾಸಗಿ ಆಸ್ಪತ್ರೆಗೆ ಕಳುಹಿಸುವ ರೋಗಿಯನ್ನು ತಿರಸ್ಕರಿಸುವಂತ್ತಿಲ್ಲ. ಹಾಗೇನಾದರೂ ತಿರಸ್ಕರಿಸಿದರೆ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆ್ಯಕ್ಟ್, ಎಪಿಡೆಮಿಕ್ ಆ್ಯಕ್ಟ್ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ.
ಒಮ್ಮೆ ಏನಾದರೂ ನಾನ್ ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಬೆಡ್ ನೀಡಲು ನಿರಾಕರಿಸಿದರೆ ಸಂಬಂಧಪಟ್ಟ ಜಿಲ್ಲಾಧಿಕಾರಿ ಹಾಗೂ ಡಿಹೆಚ್ಒ ಅವರ ಗಮನಕ್ಕೆ ತರಬಹುದೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.
ಓದಿ: ಶುರುವಾಯ್ತು ನಾನ್ ಕೋವಿಡ್ ರೋಗಿಗಳ ಪರದಾಟ, ಬೆಡ್ ಸಿಗದೇ ವೃದ್ದೆ ಹೈರಾಣು