ETV Bharat / state

ದಾವಣಗೆರೆ: ನೆಚ್ಚಿನ ಶಿಕ್ಷಕರ ವರ್ಗಾವಣೆ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ದೈಹಿಕ ಶಿಕ್ಷಕರ ವರ್ಗಾವಣೆಯಿಂದ ಅಸಮಾಧಾನಗೊಂಡ ವಿದ್ಯಾರ್ಥಿಗಳು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

students-protested-against-the-transfer-of-their-favorite-teacher-in-davanagere
ದಾವಣಗೆರೆ: ನೆಚ್ಚಿನ ಶಿಕ್ಷಕರ ವರ್ಗಾವಣೆ ವಿರೋಧಿಸಿ ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು
author img

By

Published : Aug 9, 2023, 6:47 PM IST

Updated : Aug 9, 2023, 9:12 PM IST

ನೆಚ್ಚಿನ ಶಿಕ್ಷಕರ ವರ್ಗಾವಣೆ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ದಾವಣಗೆರೆ: ನಮ್ಮ ದೇಶದಲ್ಲಿ ತಂದೆ-ತಾಯಿಯ ನಂತರದ ಸ್ಥಾನ ಗುರುಗಳಿಗೆ. ಗುರು-ಶಿಷ್ಯರ ನಡುವೆ ಅವಿನಾಭಾವ ಸಂಬಂಧ ಇರಬೇಕು ಎಂದು ಹಿರಿಯರು ಹೇಳುತ್ತಾರೆ. ಗ್ರಾಮೀಣ ಪ್ರದೇಶದ ಮಕ್ಕಳಂತೂ ತಮ್ಮ ಶಾಲೆಯ ಶಿಕ್ಷಕರೊಂದಿಗೆ ಸುಸಂಬಂಧ ಹೊಂದಿರುತ್ತಾರೆ. ಅದರಂತೆ, ಇದೀಗ ತಮ್ಮ ನೆಚ್ಚಿನ ಶಿಕ್ಷಕನ ವರ್ಗಾವಣೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದ ಕೊಂಡಜ್ಜಿ ಬಸಪ್ಪ ಅನುದಾನಿತ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು.

ಶಾಲೆಯ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ್ ಪಾಟೀಲ್ ಎಂಬವರನ್ನು ಧಿಡೀರ್​ ವರ್ಗಾವಣೆ ಮಾಡಲಾಗಿತ್ತು. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಈಗಾಗಲೇ ವರ್ಗಾವಣೆಯಾಗಿರುವ ಶಿಕ್ಷಕರು ದೂರವಾಣಿ ಮೂಲಕ ಕರೆ ಮಾಡಿ ಮಕ್ಕಳಿಗೆ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು. ಆದರೆ ಪಟ್ಟುಬಿಡದ ಮಕ್ಕಳು ಶಿಕ್ಷಕರನ್ನು ವಾಪಸ್​ ಕರೆಸಬೇಕು ಎಂದು ಒತ್ತಾಯಿಸಿದ್ದಾರೆ.

ಶಾಲೆಯಲ್ಲಿ 12 ವರ್ಷಗಳಿಂದ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ್ ಪಾಟೀಲ್ ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದರು. ಮಕ್ಕಳಲ್ಲಿ ಕ್ರೀಡಾ ಮನೋಭಾವ ಬೆಳೆಸುವುದು ಮತ್ತು ಕ್ರೀಡೆಗಳಲ್ಲಿ ಭಾಗವಹಿಸುವ ಮಕ್ಕಳು ಶೂಗಳನ್ನು ಖರೀದಿಸಲು ಸಾಧ್ಯವಾಗದಿದ್ದರೆ, ಅಂತಹ ಮಕ್ಕಳಿಗೆ ಸ್ವತಃ ತಮ್ಮ ಹಣದಿಂದ ಶೂ ಕೊಡಿಸುವ ಮೂಲಕ ಕ್ರೀಡೆಗಳಲ್ಲಿ ಭಾಗಿಯಾಗುವಂತೆ ಪ್ರೋತ್ಸಾಹಿಸುತ್ತಿದ್ದರು. ಮಕ್ಕಳ ಪ್ರೀತಿಗೆ ಪಾತ್ರರಾಗಿದ್ದ ಶಿಕ್ಷಕನ ವರ್ಗಾವಣೆಯಿಂದ ವಿದ್ಯಾರ್ಥಿಗಳು ಬೇಸರಗೊಂಡಿದ್ದಾರೆ. ಪ್ರತಿಭಟನೆಗೆ ಪೋಷಕರೂ ಕೂಡಾ ಸಾಥ್ ಕೊಟ್ಟಿದ್ದರು.

ಶಾಲಾ ಅಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಸಮಾಧಾನಪಡಿಸುವ ಪ್ರಯತ್ನ ನಡೆಸಿತು. ಹೀಗಿದ್ದರೂ ವಿದ್ಯಾರ್ಥಿಗಳು ಮಾತ್ರ ಒಪ್ಪುತ್ತಿಲ್ಲ. ಸಿರಿಗೆರೆ ತರಳಬಾಳು ಮಠದ ಆಡಳಿತಕ್ಕೊಳಪಟ್ಟಿರುವ ಈ ಶಾಲೆಯ ಐವರು ಶಿಕ್ಷಕರನ್ನು ರಾಜ್ಯದ ವಿವಿಧ ಶಾಲೆಗಳಿಗೆ ವರ್ಗಾವಣೆ ಮಾಡಲಾಗಿದೆ. ದೈಹಿಕ ಶಿಕ್ಷಕ ಬಸವರಾಜ್ ಪಾಟೀಲ್​ರನ್ನು ಹಾಸನ ಜಿಲ್ಲೆಯ ಬೇಲೂರಿನ ಶಾಲೆಯೊಂದಕ್ಕೆ ವರ್ಗಾಯಿಸಲಾಗಿದೆ.

ವಿದ್ಯಾರ್ಥಿನಿ ವಿದ್ಯಾ ಮಾತನಾಡಿ, "ವರ್ಗವಾದ ದೈಹಿಕ ಶಿಕ್ಷಕರು ಇಲ್ಲಿ 12 ವರ್ಷಗಳಿಂದ ಕಾರ್ಯನಿರ್ವಸುತ್ತಿದ್ದರು. ವಿದ್ಯಾರ್ಥಿಗಳು ಅವರ ಪಾಠಕ್ಕೆ ಹೊಂದಿಕೊಂಡಿದ್ದರು. ಇಲ್ಲಿಂದ ವರ್ಗಾವಣೆಯಾಗಿರುವ ಎಲ್ಲ ಶಿಕ್ಷಕರನ್ನು ವಾಪಸ್​ ಕರೆಸಬೇಕು. ಅದರಲ್ಲೂ ಮುಖ್ಯವಾಗಿ ದೈಹಿಕ ಶಿಕ್ಷಕರನ್ನು ಮರಳಿ ಕರೆಸಬೇಕು ಎಂದು ಪ್ರತಿಭಟನೆ ಮಾಡಿದ್ದೇವೆ. ಶಾಲಾ ಆಡಳಿತ ಮಂಡಳಿತ ಶಿಕ್ಷಕರನ್ನು ಇನ್ನೊಂದು ವಾರದಲ್ಲಿ ಕರೆಸುವ ಭರವಸೆ ನೀಡಿದ್ದಾರೆ" ಎಂದರು.

ಪೋಷಕರಾದ ಮಕ್ಬೂಲ್ ಬೀ ಮಾತನಾಡಿ, "ಈ ಶಾಲೆಯ ಶಿಕ್ಷಕರು ನಮ್ಮ ಊರಿನಲ್ಲಿ ಜನಪ್ರಿಯರಾಗಿದ್ದರು. ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು. ಹೀಗಾಗಿ ಮಕ್ಕಳು ಇಂದು ಅನ್ನ, ನೀರು ಬಿಟ್ಟು ಪ್ರತಿಭಟನೆ ಮಾಡಿದ್ದಾರೆ. ಮತ್ತೆ ಆ ಶಿಕ್ಷಕರನ್ನು ಇಲ್ಲಿಗೆ ಕರೆಸಬೇಕು. ಹಿಂದೆ ಹಲವು ಶಿಕ್ಷಕರು ವರ್ಗಾವಣೆಯಾಗಿದ್ದಾಗ ಈ ರೀತಿ ಪ್ರತಿಭಟಿಸಿರಲಿಲ್ಲ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ಪ್ರತಿಭಟಿಸುತ್ತಿದ್ದಾರೆ" ಎಂದು ಹೇಳಿದರು.

ಶಾಲೆಯ ಆಡಳಿತ ಮಂಡಳಿಯ ಸದಸ್ಯರಾದ ಚೇತನ್ ಮಾತನಾಡಿ, "ಬಸವರಾಜ್ ಪಾಟೀಲ್ ಎಂಬ ದೈಹಿಕ ಶಿಕ್ಷಕರು ಈ ಶಾಲೆಯಲ್ಲಿ ಸುಮಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಅವರನ್ನು ಏಕಾಏಕಿ ವರ್ಗಾವಣೆ ಮಾಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಅವರೇ ಬೇಕು ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ವಿದ್ಯಾರ್ಥಿಗಳ ಮನವೊಲಿಸುವ ಕೆಲಸ ಮಾಡುತ್ತಿದ್ದೇವೆ. ನಮ್ಮ ಸಿರಿಗೆರೆಯ ಗುರುಗಳು ವಿದೇಶಕ್ಕೆ ತೆರಳಿದ್ದಾರೆ ಅವರು ಬರುವುದಕ್ಕೆ ಇನ್ನು ಒಂದು ವಾರವಾಗುತ್ತದೆ. ದೈಹಿಕ ಶಿಕ್ಷಕರಿಂದ ದೂರವಾಣಿ ಕರೆ ಮಾಡಿಸಿ ಮನವೊಲಿಸುವ ಕೆಲಸ ಮಾಡಿದರೂ ವಿದ್ಯಾರ್ಥಿಗಳು ತರಗತಿಗೆ ಹೋಗುತ್ತಿಲ್ಲ. ಈ ಶಾಲೆಯಲ್ಲಿ ಐದು ಜನ ಶಿಕ್ಷಕರು ವರ್ಗಾವಣೆಯಾಗಿದ್ದಾರೆ. ಅದರಲ್ಲಿ ದೈಹಿಕ ಶಿಕ್ಷಕರ ಜೊತೆ ವಿದ್ಯಾರ್ಥಿಗಳು ಹೆಚ್ಚು ಒಡನಾಟ ಇಟ್ಟುಕೊಂಡಿದ್ದರು" ಎಂದರು.

ಇದನ್ನೂ ಓದಿ: ಬೆಳಗಾವಿ: ಕೇಂದ್ರ ಸರ್ಕಾರದ ವಿರುದ್ಧ ಸಿಐಟಿಯು ಕಾರ್ಯಕರ್ತರ ಪ್ರತಿಭಟನೆ

Last Updated : Aug 9, 2023, 9:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.