ದಾವಣಗೆರೆ : ಬೆಣ್ಣೆ ನಗರಿ ದಾವಣಗೆರೆ ವಸತಿ ಶಾಲೆಗಳಲ್ಲಿ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ. ಇದರಿಂದಾಗಿ ಮಕ್ಕಳು ಮನೆಗಳತ್ತ ಮುಖ ಮಾಡುತ್ತಿದ್ದಾರೆ. ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ವಸತಿ ಶಾಲೆಯಲ್ಲಿರುವ ಮಕ್ಕಳ ಪೋಷಕರು ಆತಂಕದಲ್ಲಿದ್ದಾರೆ.
ತಮ್ಮ ಮಕ್ಕಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದಾರೆ. ಅದರಲ್ಲಿಯೂ ದಾವಣಗೆರೆಯ ಸಿದ್ದಗಂಗಾ ಸೇರಿದಂತೆ ಹಲವು ಶಾಲೆಗಳಲ್ಲಿ ಮಕ್ಕಳು ಗಂಟು ಮೂಟೆ ಕಟ್ಟಿಕೊಂಡು ಮನೆಗೆ ತೆರಳುತ್ತಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ 213 ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿದೆ. ಶಾಲೆಯಲ್ಲಿಯೇ ಇದ್ದರೆ ಕೊರೊನಾ ತಗುಲಬಹುದು ಎಂಬ ಆತಂಕದಿಂದ ಮನೆಯಿಂದಲೇ ಮಕ್ಕಳಿಗೆ ಆನ್‌ಲೈನ್ ಕ್ಲಾಸ್ ನೀಡುವಂತೆ ತಿಳಿಸಿ ಪೋಷಕರು ತಮ್ಮ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದಾರೆ. ಪೋಷಕರ ಒತ್ತಾಯದ ಮೇರೆಗೆ ಕಾಲೇಜು ಆಡಳಿತ ಮಂಡಳಿ ಮಕ್ಕಳನ್ನು ಮನೆಗೆ ಕಳುಹಿಸಲು ಸಮ್ಮತಿಸಿದೆ.
ಇದನ್ನೂ ಓದಿ: ಪೊಲೀಸ್ ಆಯುಕ್ತ ಕಮಲ್ ಪಂತ್ಗೆ ಕೋವಿಡ್ ಸೋಂಕು