ETV Bharat / state

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆತಂಕ ಬೇಡ: ಎಸ್.ಆರ್.ಉಮಾಶಂಕರ್

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್-19 ವೈರಾಣು ಸೋಂಕು ತಡೆ ಕುರಿತು ಅರಿವು ಮೂಡಿಸಬೇಕು. ಸಾಮಾಜಿಕ ಅಂತರಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಪರೀಕ್ಷಾ ಕೇಂದ್ರದ ದ್ವಾರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಪರೀಕ್ಷಾ ಸಮಯಕ್ಕೂ ಮೊದಲೇ ಹಾಜರಿದ್ದು, ಪ್ರತಿ ಪರೀಕ್ಷಾರ್ಥಿಯನ್ನು ಥರ್ಮಲ್ ಸ್ಕ್ಯಾನಿಂಗ್ ಮಾಡಿ, ಕೈಗಳಿಗೆ ಸ್ಯಾನಿಟೈಸರ್ ಕಡ್ಡಾಯವಾಗಿ ಹಾಕಬೇಕು ಎಂದು ಪ್ರೌಢಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

SR Umashankar
ಎಸ್.ಆರ್.ಉಮಾಶಂಕರ್
author img

By

Published : Jun 3, 2020, 11:27 AM IST

ದಾವಣಗೆರೆ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದಲ್ಲಿ ಬಹಳ ಮುಖ್ಯವಾದ ಘಟ್ಟ. ವಿದ್ಯಾರ್ಥಿಗಳ ಭವಿಷ್ಯದ ಮುಂದಿನ ದಾರಿ ತೀರ್ಮಾನಿಸುವ ತಿರುವಾಗಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯಲು ಮಾನಸಿಕವಾಗಿ ಸಿದ್ಧರಾಗವಂತೆ ಶಿಕ್ಷಕರು, ಶಿಕ್ಷಣ ಇಲಾಖೆ ಅಗತ್ಯವಾದ ಸಿದ್ದತೆ ನಡೆಸಿಕೊಳ್ಳುವಂತೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸೂಚಿಸಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಪೂರ್ವ ಸಿದ್ಧತೆಗಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜೂ.25 ರಿಂದ ಆರಂಭವಾಗಲಿದ್ದು, ಜಿಲ್ಲೆಯ ಪ್ರತಿಯೊಬ್ಬ ಪರೀಕ್ಷಾರ್ಥಿ ಪರೀಕ್ಷೆ ಬರೆಯವುದರಿಂದ ವಂಚಿತರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳೊಂದಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲಾಗುವುದು. ಲಾಕ್‍ಡೌನ್ ಸಮಸ್ಯೆಯಿಂದ ಪರೀಕ್ಷೆ ಮಾಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಜೂನ್ 25 ರಿಂದ ಜುಲೈ 4 ರವರೆಗೆ ನಡೆಸಲಾಗುವುದು. 18 ರಿಂದ 20 ವಿದ್ಯಾರ್ಥಿಗಳು ಒಂದು ಕೊಠಡಿಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ವಿದ್ಯಾರ್ಥಿಗೆ 2 ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಲಾಗುವುದು. ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ ಇವುಗಳನ್ನ ವಿತರಣೆ ಮಾಡಲಿವೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗುವುದು ಎಂದರು.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್-19 ವೈರಾಣು ಸೋಂಕು ತಡೆ ಕುರಿತು ಅರಿವು ಮೂಡಿಸಬೇಕು. ಸಾಮಾಜಿಕ ಅಂತರಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಪರೀಕ್ಷಾ ಕೇಂದ್ರದ ದ್ವಾರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಪರೀಕ್ಷಾ ಸಮಯಕ್ಕೂ ಮೊದಲೇ ಹಾಜರಿದ್ದು, ಪ್ರತಿ ಪರೀಕ್ಷಾರ್ಥಿಯನ್ನು ಥರ್ಮಲ್ ಸ್ಕ್ಯಾನಿಂಗ್ ಮಾಡಿ, ಕೈಗಳಿಗೆ ಸ್ಯಾನಿಟೈಸರ್ ಕಡ್ಡಾಯ ಹಾಕಬೇಕು. ಕರ್ತವ್ಯ ನಿರತ ಶಿಕ್ಷಕರು ಪದೇ ಪದೆ ಸ್ಯಾನಿಟೈಸರ್ ಉಪಯೋಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಿಲ್ಲ. ಕೆಲ ರಾಜ್ಯಗಳಲ್ಲಿ ಈಗಾಗಲೇ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲಾಗುತ್ತಿದೆ. ಹಾಗಾಗಿ ನಮ್ಮ ರಾಜ್ಯದಲ್ಲೂ ಪರೀಕ್ಷೆ ನಡೆಸಲು ಎಲ್ಲ ರೀತಿಯಿಂದಲೂ ಚರ್ಚಿಸಿ ಹಾಗೂ ಶಿಕ್ಷಣ ತಜ್ಞರ ಅಭಿಪ್ರಾಯ ಸಂಗ್ರಹಿಸಿ ಜೊತೆಗೆ ಅಧಿಕಾರಿಗಳ ಸಭೆ ನಡೆಸಿ ಸರ್ಕಾರ ನಿರ್ಧಾರ ಕೈಗೊಂಡಿದೆ. ಜಿಲ್ಲಾಧಿಕಾರಿಗಳು ಜಿಲ್ಲೆಯ ಪರೀಕ್ಷಾ ಮುಖ್ಯಸ್ಥರಾಗಿದ್ದು, ಯಾವುದೇ ಅಡಚಣೆಗಳಿಲ್ಲದೇ ಪರೀಕ್ಷೆ ನಡೆಸಲು ಅಧಿಕಾರಿಗಳು ಸೂಚಿಸಿದ್ದಾರೆ. ಹಾಗಾಗಿ ಕೊರೊನಾ ಬಗ್ಗೆ ವಿದ್ಯಾರ್ಥಿಗಳಲ್ಲಿ ಯಾವುದೇ ಆತಂಕ ಬೇಡ. ಬದಲಾಗಿ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು.

ಖಾಸಗಿ ಶಾಲಾ ಬಸ್ ವ್ಯವಸ್ಥೆ:

ಲಾಕ್‍ಡೌನ್ ಹಿನ್ನೆಲೆಯಲ್ಲಿ ಬಸ್ ಸಂಚಾರ ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ. ಪರೀಕ್ಷಾ ಸಮಯದಲ್ಲಿ ಸಹಜ ಸ್ಥಿತಿಗೆ ಮರಳುವುದು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎನ್ನುವ ದೃಷ್ಟಿಯಲ್ಲಿ ಖಾಸಗಿ ಶಾಲಾ ವಾಹನ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಬಸ್ ಸಂಚಾರ ಇಲ್ಲದಿರುವ ಕಡೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಪರೀಕ್ಷಾ ಕೇಂದ್ರಗಳಿಗೆ ಬಿಡಬೇಕು. ಬಳಿಕ ಅವರ ಕೇಂದ್ರಸ್ಥಾನದಿಂದ ಪುನಃ ಕರೆದುಕೊಂಡ ಹೋಗಬೇಕು ಎಂದರು.

ಬಹುತೇಕ ಜಿಲ್ಲೆಗಳಲ್ಲಿ ಶಾಲೆಗಳು ಕ್ವಾರಂಟೈನ್ ಕೇಂದ್ರಗಳಾಗಿವೆ ಹಾಗೂ ಗಡಿಭಾಗದಲ್ಲಿನ ಶಾಲೆಗಳೂ ಕ್ವಾರಂಟೈನ್ ಕೇಂದ್ರಗಳಾಗಿದ್ದವು. ಆದರೆ, ಇದೀಗ ಅಂತಹ ಶಾಲೆಗಳು ಪರೀಕ್ಷಾ ಕೇಂದ್ರಗಳಾಗಿದ್ದಲ್ಲಿ ಅವುಗಳನ್ನು ಮೂರು ದಿನಗಳ ಮುಂಚಿತವಾಗಿ ಡಿಸ್‍ಇನ್‍ಫೆಕ್ಷನ್ ಮಾಡಬೇಕು. ಜಿಲ್ಲೆಯಲ್ಲಿ ಆ ರೀತಿ ಯಾವ ಶಾಲೆಯಿಲ್ಲ. ಜಾಲಿನಗರದ ದುರ್ಗಾಬಿಂಕಾ ಶಾಲೆಯೂ ಕಂಟೇನ್​ಮೆಂಟ್​ ಜೋನ್​ಗೆ ಒಳಪಟ್ಟಿತ್ತು. ಅದರ ಬದಲಿಗೆ ಪೂರಕ ಶಾಲೆ ಗೊತ್ತು ಮಾಡಲಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪರಮೇಶ್ವರಪ್ಪ ಮಾತನಾಡಿ, ಸರ್ಕಾರದ ಆದೇಶದಂತೆ ಜೂ.25 ರಿಂದ ಜು.4 ರವರೆಗೆ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸಬೇಕು ಎಂದು ನಿರ್ಧರಿಸಿದ್ದೇವೆ. ಜಿಲ್ಲೆಯಲ್ಲಿ ಒಟ್ಟು 435 ಸರ್ಕಾರಿ ಶಾಲೆಗಳಿದ್ದು, 1150 ಕೊಠಡಿಗಳ ವ್ಯವಸ್ಥೆ ಇದೆ, ಒಂದು ಕೊಠಡಿಯಲ್ಲಿ 18 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶವಿದೆ. ಜಿಲ್ಲೆಯಲ್ಲಿ ಒಟ್ಟು 20,927 ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿದ್ದು, ಈ ಪೈಕಿ 10,311 ವಿದ್ಯಾರ್ಥಿಗಳು ಹಾಗೂ 10,616 ವಿದ್ಯಾರ್ಥಿನಿಯರಿದ್ದಾರೆ. ವಿದ್ಯಾರ್ಥಿಗಳು ಭಯ ಪಡದ ರೀತಿಯಲ್ಲಿ ಪತ್ರಿಕೆಗಳಲ್ಲಿ ಫೋನ್ ಇನ್ ಕಾರ್ಯಕ್ರಮ ನಡೆಸಲಾಗಿದೆ. ಮತ್ತು ಚಂದನ ವಾಹಿನಿಯ ಪುನರ್ ಮನನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗಿಯಾಗಿ ಸಮಸ್ಯೆಗೆ ಪರಿಹಾರ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.