ದಾವಣಗೆರೆ: ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರೆ ನೀಡಿರುವ ಸಂಡೇ ಕರ್ಫ್ಯೂಗೆ ದಾವಣಗೆರೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಕಳೆದ ಎರಡು ದಿನಗಳಲ್ಲಿ 91 ಕೊರೊನಾ ಪಾಸಿಟಿವ್ ಪ್ರಕರಣಗಳು ಜಿಲ್ಲೆಯಲ್ಲಿ ದೃಢಪಟ್ಟಿರುವ ಕಾರಣ ಜನರು ಆತಂಕಕ್ಕೊಳಗಾಗಿದ್ದು, ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಹೊನ್ನಾಳಿ, ಹರಿಹರ, ಚನ್ನಗಿರಿ, ಜಗಳೂರು ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.