ETV Bharat / state

ದಾವಣಗೆರೆಯಲ್ಲಿ ಭಾನುವಾರ ಸಂಪೂರ್ಣ ಲಾಕ್‍ಡೌನ್: ಮದುವೆ ಸಮಾರಂಭಗಳಿಗೆ ಇಲ್ಲ ಅಡ್ಡಿ! - latest davanagere news

ಪ್ರತಿ ದಿನ ರಾತ್ರಿ 7ರಿಂದ ಬೆಳಿಗ್ಗೆ 7ರವರೆಗೆ ಅನವಶ್ಯಕವಾಗಿ ಸಂಚರಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಭಾನುವಾರದಂದು ಹೆಚ್ಚುವರಿಯಾಗಿ ಬೆಳಿಗ್ಗೆ 7ರಿಂದ ಸಂಜೆಯವರೆಗೆ ಸಹ ಎಲ್ಲಾ ಅವಶ್ಯಕವಲ್ಲದ ಚಟುವಟಿಕೆಗಳಿಗೆ ಬ್ರೇಕ್​ ಹಾಕಲಾಗಿದೆ.

sunday full day lockdown
ದಾವಣಗೆರೆಯಲ್ಲಿ ಭಾನುವಾರ ಸಂಪೂರ್ಣ ಲಾಕ್‍ಡೌನ್
author img

By

Published : May 22, 2020, 1:20 PM IST

ದಾವಣಗೆರೆ: ಕೋವಿಡ್-19 ಸೋಂಕು ಹರಡುವಿಕೆ ತಡೆಯಲು ಮೇ 24ರ ಭಾನುವಾರ ಜಿಲ್ಲೆಯನ್ನು ಸಂಪೂರ್ಣ ಲಾಕ್​ಡೌನ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ತಿಳಿಸಿದ್ದಾರೆ.

ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 7ರವರೆಗೆ ಅನವಶ್ಯಕವಾಗಿ ಸಂಚರಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಭಾನುವಾರದಂದು ಹೆಚ್ಚುವರಿಯಾಗಿ ಬೆಳಿಗ್ಗೆ 7ರಿಂದ ಸಂಜೆಯವರೆಗೆ ಸಹ ಎಲ್ಲಾ ಅವಶ್ಯಕವಲ್ಲದ ಚಟುವಟಿಕೆಗಳಿಗೆ ಬ್ರೇಕ್​ ಹಾಕಲಾಗಿದೆ.

ದಾವಣಗೆರೆಯಲ್ಲಿ ಭಾನುವಾರ ಸಂಪೂರ್ಣ ಲಾಕ್‍ಡೌನ್

ಸಾರ್ವಜನಿಕರು ಭಾನುವಾರ ಪೂರ್ಣ ದಿನ ಲಾಕ್‍ಡೌನ್ ಇರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಪಡಿಸಿರುವಂತಹ ಮದುವೆ ಸಮಾರಂಭಗಳನ್ನು ನಡೆಸಲು ಸ್ಪಷ್ಟೀಕರಣ, ಅನುಮತಿ ನೀಡುವಂತೆ ಕೋರಿದ್ದಾರೆ. ಆದೇಶದಲ್ಲಿ ಭಾನುವಾರದಂದು ಲಾಕ್‍ಡೌನ್ ಎಂದು ಆದೇಶಿಸಲಾಗಿರುತ್ತದೆ. ಆದರೆ ಮದುವೆ ಸಮಾರಂಭಗಳು ಈ ಹಿಂದೆಯೇ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಸಾಮಾಜಿಕ ಅಂತರ ಖಾತರಿಪಡಿಸಿಕೊಂಡು ಗರಿಷ್ಠ ಅತಿಥಿಗಳ ಸಂಖ್ಯೆಯನ್ನು 50ಕ್ಕೆ ಸೀಮಿತಗೊಳಿಸಿ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಸರಳವಾಗಿ ಮದುವೆ ಸಮಾರಂಭ ನಡೆಸಲು ಅನುಮತಿ ನೀಡಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.